ಪಿರಿಯಾಪಟ್ಟಣ: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಟ್ಟಣದ ಮಹದೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆ ಬಳಿ ನಡೆದಿದೆ. ಗಾಯತ್ರಿ ಹತ್ಯೆಯಾದ ಯುವತಿ. ಈಕೆಯ ತಂದೆ ಜಯರಾಮ್ ಕೊಲೆ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಗಾಯತ್ರಿ ಎಂಬಾಕೆ ರಾಘವೇಂದ್ರ ಎಂಬ ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದಳು. ಮನೆಯವರು ಬೇಡ ಎಂದರೂ ಕೇಳದೇ ಆತನನ್ನು ಮದುವೆಯಾಗುತ್ತೇನೆ ಎನ್ನುತ್ತಿದ್ದಳು. ಇದರಿಂದ ಕುಪಿತಗೊಂಡ ತಂದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಊಟ ಕೊಡಲು ಬಂದ ಮಗಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ನಂತರ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡು ಶರಣಾಗಿದ್ದಾನೆ. ಬಳಿಕ ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ರವಿಪ್ರಸಾದ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ:ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಜಾಮೀನು ಕೋರಿದ್ದ ಅತ್ಯಾಚಾರ ಆರೋಪಿಯ ಅರ್ಜಿ ವಜಾ