ಮೈಸೂರು: ಕೋವಿಡ್ ಕೇರ್ ಸೆಂಟರ್ನಲ್ಲಿ ಸಂಗೀತ ರಸಸಂಜೆ ಕಾರ್ಯಕ್ರಮ ಏರ್ಪಡಿಸಿದ್ದು, ರೋಗಿಗಳನ್ನು ಇಲ್ಲಿನ ತಹಶೀಲ್ದಾರ್ ಹಾಡಿ ರಂಜಿಸಿದರು.
ಹುಣಸೂರಿನ ಬಾಚಹಳ್ಳಿ ರಸ್ತೆಯ ಆದರ್ಶ ಶಾಲೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ಕೊರೊನಾ ಸೋಂಕಿತರ ಮನೋಬಲ ಹೆಚ್ಚಿಸುವ ತಾಲೂಕಾಡಳಿತ ಈ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಸವರಾಜ್ ಜೊತೆ ಇಒ ಗಿರೀಶ್ ಹಾಗೂ ಇತರ ಕಲಾವಿದರು ಹಾಡಿದರು. ಶಾಸಕ ಹೆಚ್.ಪಿ. ಮಂಜುನಾಥ್ ಸೇರಿದಂತೆ ತಾಲೂಕು ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.