ಮೈಸೂರು: ಜಿಲ್ಲೆಯಲ್ಲಿ ಇಂದು 748 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1285 ಜನ ಡಿಸ್ಚಾರ್ಜ್ ಆಗಿದ್ದಾರೆ. 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೋವಿಡ್ ಪ್ರಕರಣಗಳ ವಿವರ: ಇಂದು ಜಿಲ್ಲೆಯಲ್ಲಿ 748 ಸೋಂಕಿತ ಪ್ರಕರಣಗಳು ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 27,488ಕ್ಕೆ ಏರಿಕೆಯಾಗಿದೆ.
ಗುಣಮುಖ: ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 1285 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಡಿಸ್ಚಾರ್ಜ್ ಆದವರ ಸಂಖ್ಯೆ ಹೆಚ್ಚಾಗಿದೆ. ಒಟ್ಟು 20,864 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 5,992 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರ ಮಾಹಿತಿ: ಈ ದಿನ ಜಿಲ್ಲೆಯಲ್ಲಿ 17 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 632ಕ್ಕೆ ಏರಿಕೆಯಾಗಿದೆ.