ಮೈಸೂರು: ಮೈಸೂರು ವಿಮಾನ ನಿಲ್ದಾಣ ಇನ್ಮುಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ವಿಮಾನ ನಿಲ್ದಾಣವಾಗಲಿದೆ. ಹಲವಾರು ವರ್ಷಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೈಸೂರು ಮಹಾರಾಜರ ಹೆಸರು ಇಡಬೇಕು ಎನ್ನುವುದು ಮೈಸೂರು ರಾಜಕಾರಣಿಗಳ ಮತ್ತು ಜನರ ಒತ್ತಾಯವಾಗಿತ್ತು.
ಸಂಸದ ಪ್ರತಾಪ ಸಿಂಹ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕೆಂದು ಸಿಎಂಗೆ ಮನವಿ ಮಾಡಿದ್ದರು. ಅದರಂತೆ ಮನವಿಗೆ ಕ್ಯಾಬಿನೆಟ್ ನಿರ್ಧಾರದ ಮೂಲಕ ಸಿಎಂ ಒಪ್ಪಿಗೆ ನೀಡಿದ್ದಾರೆ. ಇದಕ್ಕೆ ಸಂಸದರು ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಇದನ್ನೂ ಓದಿ: ಮೈಸೂರಿನ ರೈಲ್ವೆ, ವಿಮಾನ ನಿಲ್ದಾಣ ಮರುನಾಮಕರಣಕ್ಕೆ ಸಂಸದ ಪ್ರತಾಪಸಿಂಹ ಮನವಿ