ETV Bharat / state

ನಂಜನಗೂಡು: ಕಪಿಲಾ ನದಿಗೆ ಹಾರಿ ವೃದ್ಧ ಆತ್ಮಹತ್ಯೆ - man commits suicide by jumping into the Kapila River

ಕಬಿನಿ ಜಲಾಶಯದಿಂದ ಹೆಚ್ಚು ನೀರನ್ನು ಕಪಿಲಾ ನದಿಗೆ ಬಿಟ್ಟಿದ್ದು, ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಈ ನದಿಗೆ ವೃದ್ಧನೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಕಪಿಲಾ ನದಿಗೆ ಹಾರಿ ವೃದ್ಧ ಆತ್ಮಹತ್ಯೆ
ಕಪಿಲಾ ನದಿಗೆ ಹಾರಿ ವೃದ್ಧ ಆತ್ಮಹತ್ಯೆ
author img

By

Published : Aug 9, 2020, 9:02 PM IST

Updated : Aug 9, 2020, 10:05 PM IST

ಮೈಸೂರು: ಕಪಿಲಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಈ ನಡುವೆ ವೃದ್ಧನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಕಪಿಲಾ ನದಿಗೆ ಹಾರಿ ವೃದ್ಧ ಆತ್ಮಹತ್ಯೆ

ಕಬಿನಿ ಜಲಾಶಯದಿಂದ ಹೆಚ್ಚು ನೀರನ್ನು ಕಪಿಲಾ ನದಿಗೆ ಬಿಟ್ಟಿದ್ದು, ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಈ ಸಂದರ್ಭದಲ್ಲಿ ಮುದ್ದಾಮಾದು (68) ಎಂಬ ವೃದ್ಧ ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಪಟ್ಟಣದ ಶ್ರೀರಾಂಪುರ ಬಡಾವಣೆ ನಿವಾಸಿಯಾಗಿದ್ದಾರೆ. ಹೆಜ್ಜಿಗೆ ಸೇತುವೆಯಿಂದ ವೃದ್ಧ ನದಿಗೆ ಹಾರಿದ ದೃಶ್ಯವನ್ನು ಸ್ಥಳೀಯರು ಕಂಡಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ

ಸ್ಥಳಕ್ಕೆ ಬಂದ ನಂಜನಗೂಡು ಪಟ್ಟಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ನದಿಯಲ್ಲಿ ವೃದ್ಧನ ಮೃತದೇಹದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Aug 9, 2020, 10:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.