ಮೈಸೂರು: ಸರಸ್ವತಿಪುರಂ ಠಾಣಾ ವ್ಯಾಪ್ತಿಯ ಲಾಡ್ಜ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲ, ಈ ದಂಧೆಗೆ ಬಳಸಿಕೊಳ್ಳಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ರಿಂಗ್ ರಸ್ತೆಯ ಆನಂದ ನಗರದಲ್ಲಿರುವ ಲಾಡ್ಜಿಂಗ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ ಪೊಲೀಸರು, ಪಶ್ಚಿಮ ಬಂಗಾಳದ ಮಹಿಳೆ ಸೇರಿದಂತೆ ಮೂವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಮುಂಬೈ ರೆಡ್ ಲೈಟ್ ಏರಿಯಾದಂತೆ ಬೆಂಗಳೂರಿನ ಲಾಡ್ಜ್ನಲ್ಲಿ ಸಿಕ್ರೆಟ್ ವೇಶ್ಯಾವಾಟಿಕೆ.. ಸಿಕ್ಕಿಬಿದ್ದ ಚಾಲಾಕಿಗಳು