ETV Bharat / state

ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಸಿಎಂ.. ಮೆರವಣಿಗೆಗೆ ಚಾಲನೆ

author img

By

Published : Oct 5, 2022, 11:22 AM IST

Updated : Oct 5, 2022, 12:08 PM IST

ವಿಜಯ ದಶಮಿಯ ದಿನವಾದ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಚಾಮುಂಡೇಶ್ವರಿ ಉತ್ಸವ ಮೂರ್ತಿ
chamundeshwari utsavamurthy

ಮೈಸೂರು: ವಿಜಯದಶಮಿಯ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಚಿನ್ನದ ಅಂಬಾರಿ ಮೇಲೆ ವಿರಾಜಮಾನಳಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಎಸ್.ಟಿ. ಸೋಮಶೇಖರ್ ತಾಯಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಜಂಬೂ ಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದ ಸ್ವರ ತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ. ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡು ಬದಿ ಭಕ್ತ ಸಮೂಹವೇ ನೆರೆದಿದೆ.

ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿದ ಸಿಎಂ

ಚಾಮುಂಡೇಶ್ವರಿ ದೇವಸ್ಥಾನದಿಂದ ದಾಸೋಹ ಭವನದವರೆಗೆ ನಡೆದುಕೊಂಡ ಬಂದ ಸಿಎಂ ಬಸವರಾಜ ಬೊಮ್ಮಾಯಿ, ಸಾರ್ವಜನಿಕರತ್ತ ಕೈ ಬೀಸುತ್ತ ವಿಜಯ ದಶಮಿ ಶುಭ ಕೋರಿದರು.

ಇದನ್ನೂ ಓದಿ: ಮೈಸೂರು ದಸರಾ ಪಂಜಿನ ಕವಾಯತು ರಿಹರ್ಸಲ್​ಗೆ ಮನಸೋತ ಪ್ರವಾಸಿಗರು

ಈ ವೇಳೆ ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಜಿ.ಟಿ. ದೇವೇಗೌಡ, ಮೇಯರ್ ಶಿವಕುಮಾರ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು.

Last Updated : Oct 5, 2022, 12:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.