ETV Bharat / state

ಸಮಾಜದಲ್ಲಿ ಬಡವ ಶ್ರೀಮಂತ ಎಂಬ ಮೇಲು ಕೀಳು ಬರಲು ಜಾತಿ ವ್ಯವಸ್ಥೆಯೇ ಕಾರಣ: ಸಿದ್ದರಾಮಯ್ಯ ಅಭಿಮತ

ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡ ಕಡೇಮಾಲಮ್ಮ ದೇವಸ್ಥಾನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

CM Siddaramaiah worship to Kademalamma Devi
ಕಡೇಮಾಲಮ್ಮ ದೇವಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದರು.
author img

By ETV Bharat Karnataka Team

Published : Nov 17, 2023, 8:04 PM IST

ಮೈಸೂರು: ದೇವರ ಹೆಸರಲ್ಲಿ ಮನುಷ್ಯರ ನಡುವೆ ಗೋಡೆ ಕಟ್ಟುವುದು - ದ್ವೇಷಿಸುವುದು ದೇವರಿಗೆ ಒಪ್ಪಿಗೆ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಕಡೇಮಾಲಮ್ಮ ದೇವಸ್ಥಾನವನ್ನು ಉದ್ಘಾಟಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕಡೇಮಾಲಮ್ಮ ದೇವಸ್ಥಾನ ಉದ್ಘಾಟಿಸಲು ಬಹಳ ಖುಷಿ ಆಗಿದೆ.

ದೇವಿಯಿಂದ ಇಡಿ ಕಳಲೆ ಗ್ರಾಮಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೀನಿ. ನನಗೆ ಈ ಊರಿನ ಪರಿಚಯ ಚೆನ್ನಾಗಿದೆ. ಈ ಊರಲ್ಲಿ ಎಲ್ಲ ಧರ್ಮ ಜಾತಿಯವರು ಸಹಬಾಳ್ವೆಯಿಂದ, ಸೌಹಾರ್ದತೆಯಿಂದ ಬದುಕುತ್ತಿರುವುದು ಮಾದರಿ, ಆದರ್ಶವಾಗಿದೆ. ಸಮಾಜದಲ್ಲಿ ಬಡವ ಶ್ರೀಮಂತವೆಂಬ ಮೇಲು ಕೀಳು ಬರಲು ಜಾತಿ ವ್ಯವಸ್ಥೆಯೇ ಕಾರಣ. ಆದರೆ, ಕಳಲೆ ಗ್ರಾಮದಲ್ಲಿ ಸರ್ವ ಜಾತಿಗಳ ಸೌಹಾರ್ದದ ಬದುಕು ಆಚರಣೆಯಲ್ಲಿದೆ ಎಂದು ಮೆಚ್ಚುಗೆ ಸೂಚಿಸಿದರು.

ಎಲ್ಲ ಜಾತಿ-ಧರ್ಮದ ಬಡವರಿಗೆ ಆರ್ಥಿಕ ಶಕ್ತಿ ಬಾರದ ಹೊರತು ಅಸಮಾನತೆ ಹೋಗಲು ಸಾಧ್ಯವಿಲ್ಲ. ಈ ಕಾರಣದಿಂದಾಗಿ ನಮ್ಮ ಸರ್ಕಾರ ಆರ್ಥಿಕವಾಗಿ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಅಂದು ಟೀಕಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಗ್ಯಾರಂಟಿ ಯೋಜನೆ ಕೈಗೊಳ್ಳುತ್ತಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಹೊಟ್ಟೆಕಿಚ್ಚು ಬಂದು ಬಿಟ್ಟಿದೆ. ಆದರೆ, ನಾವು ಯಾರಿಗೇ ಹೊಟ್ಟೆಕಿಚ್ಚು ಬಂದರೂ ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ವ್ಯಂಗ್ಯವಾಗಿ ಟೀಕಿಸಿದರು.

ಲಕ್ಷ್ಮೀಕಾಂತ ದೇವಸ್ಥಾನದ ಜಾತ್ರೆ ಐತಿಹಾಸಿಕ: ಯಾವ ಸಮಾಜದಲ್ಲಿ ಒಗ್ಗಟ್ಟು ಇರುವುದಿಲ್ಲವೋ ಆ ಸಮಾಜ ಉಳಿಯಲು ಸಾಧ್ಯವಿಲ್ಲ. ಆದರೆ ಭಾರತದ ಎಲ್ಲ ಸಂಸ್ಥಾನಗಳು ಒಟ್ಟಾಗಿ ಗಟ್ಟಿಯಾಗಿ ಸೌಹಾರ್ದತೆ ಬೆಳೆಸಿಕೊಂಡಿವೆ. ಐತಿಹಾಸಿಕ ಇತಿಹಾಸ ಹೊಂದಿರುವ ಕಳಲೆ ಗ್ರಾಮ ಕೂಡ ಈ ಸಂಸ್ಕೃತಿಗೆ ಒಗ್ಗಿಕೊಂಡಿವೆ. ಇಲ್ಲಿನ ಲಕ್ಷ್ಮೀಕಾಂತ ದೇವಸ್ಥಾನದ ಜಾತ್ರೆ ಐತಿಹಾಸಿಕ ಎಂದು ವಿವರಿಸಿದರು.

ಸ್ವಾರ್ಥರಹಿತ ಪೂಜೆ ಮಾತ್ರ ದೇವರಿಗೆ ಸಲ್ಲಿಕೆ: ಶುದ್ದವಾದ ಮನಸ್ಸು ಇಲ್ಲದೇ ಮಾಡುವ ಪೂಜೆಯನ್ನು ದೇವರು ಸ್ವೀಕರಿಸುವುದಿಲ್ಲ. ಸರ್ವರ ಒಳಿತಿನ ಪೂಜೆ ಮಾತ್ರ ಸ್ವೀಕಾರಗೊಳ್ಳುತ್ತದೆ. ಸ್ವಾರ್ಥರಹಿತ ಪೂಜೆ ಮಾತ್ರ ದೇವರಿಗೆ ಸಲ್ಲುತ್ತದೆ. ಮನುಷ್ಯರಾದವರು ಮನುಷ್ಯರನ್ನು ಮನುಷ್ಯತ್ವದ ಆಧಾರದಲ್ಲಿ ಪ್ರೀತಿಸಬೇಕು. ಜಾತಿ ಆಧಾರದಲ್ಲಿ ಪ್ರೀತಿಸುವುದು ಮನುಷ್ಯ ಪ್ರೀತಿ ಆಗುವುದಿಲ್ಲ ಎಂದರು. ಶಾಸಕ ದರ್ಶನ್ ದ್ರುವನಾರಾಯಣ್ ಹಾಗೂ ಗ್ರಾಮದ ಮುಖಂಡರು ಹಾಜರಿದ್ದರು.

ಇದನ್ನೂಓದಿ:14 ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ: 12 ದಿನಕ್ಕೆ 8 ಕೋಟಿ 72 ಲಕ್ಷ ಆದಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.