ಮೈಸೂರು : ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸಮಾನ ಮತ ಬಂದು ಲಾಟರಿ ಮೂಲಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದರು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜ್ ಅಧ್ಯಕ್ಷರಾಗಿ ಆಯ್ಕೆಯಾದರು. ಇಲ್ಲಿನ ಎಪಿಎಂಸಿಯಲ್ಲಿ ಒಟ್ಟು 16 ಸದಸ್ಯರಿದ್ದರು. ಅದರಲ್ಲಿ 6 ಕಾಂಗ್ರೆಸ್ ಬೆಂಬಲಿತ, 6 ಜೆಡಿಎಸ್ ಬೆಂಬಲಿತ, 3 ನಾಮ ನಿರ್ದೇಶಿತ ಹಾಗೂ ಒಬ್ಬರು ವರ್ತಕ ಕ್ಷೇತ್ರದ ಸದಸ್ಯರನ್ನು ಹೊಂದಿದೆ.
ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಬಸವರಾಜ್, ಜೆಡಿಎಸ್ ಬೆಂಬಲಿತ ನಾಗರಾಜ್ 8 ಮತಗಳನ್ನು ಗಳಿಸಿದರು. ಇಬ್ಬರು ಸಮಾನವಾಗಿ ಮತ ತೆಗೆದುಕೊಂಡಿರುವುದರಿಂದ ಲಾಟರಿ ಎತ್ತಲಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜ್ ಆಯ್ಕೆಯಾದರು. ಜೆಡಿಎಸ್ ಬೆಂಬಲಿತ ನಾಗರಾಜ್ ಉಪಧ್ಯಾಕ್ಷರಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ನ ಕಾರ್ಯಕರ್ತರು ಅಧ್ಯಕ್ಷರಿಗೆ ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.