ETV Bharat / state

ಕೋವಿಡ್​ಗೆ ಹುಣಸೂರು ನಗರ ಠಾಣೆಯ ಕಾನ್ಸ್​​ಸ್ಟೇಬಲ್​ ಬಲಿ - Hunsur city station

ಮೈಸೂರಿನಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನೇ ದಿನೆ ಉಲ್ಬಣವಾಗುತ್ತಿವೆ. ಹುಣಸೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್​​ಸ್ಟೇಬಲ್​​ ಒಬ್ಬರು ಇಂದು ಸೋಂಕಿಗೆ ಬಲಿಯಾಗಿದ್ದಾರೆ.

Mysore
ಕೋವಿಡ್​ಗೆ ಹುಣಸೂರು ನಗರ ಠಾಣೆಯ ಕಾನ್ಸ್​​ಸ್ಟೇಬಲ್​ ಬಲಿ
author img

By

Published : Aug 24, 2020, 11:33 AM IST

ಮೈಸೂರು: ಕೊರೊನಾ ಸೋಂಕಿನಿಂದ ಕಾನ್ಸ್​​ಸ್ಟೇಬಲ್​​ವೊಬ್ಬರು ಮೃತಪಟ್ಟಿರುವ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.

ರವಿಕುಮಾರ್ (43) ಮೃತ ಕೊರೊನಾ ವಾರಿಯರ್​. ಹುಣಸೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇವರಿಗೆ ಸೋಂಕು ದೃಢಪಟ್ಟಿತ್ತು. ಬಳಿಕ ಇವರನ್ನು ಪೊಲೀಸ್​ ವಸತಿ ಗೃಹದಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಜ್ವರ ಹೆಚ್ಚಾದ ಕಾರಣ ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಹುಣಸೂರಿನಲ್ಲಿ ಕಳೆದ 48 ಗಂಟೆಗಳಲ್ಲಿ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತಪಟ್ಟ ಎಲ್ಲರ ಅಂತ್ಯಕ್ರಿಯೆ ಕೋವಿಡ್ ಮಾರ್ಗಸೂಚಿಯಂತೆ ನೆರವೇರಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.