ಮೈಸೂರು: ತಿ.ನರಸೀಪುರ ತಾಲೂಕು ಬನ್ನೂರಿನ ಹೋಬಳಿಯ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ.
ವಿವೇಕಾನಂದ ಶಿಕ್ಷಣ ಸಂಸ್ಥೆಯ 9 ಮತ್ತು 10ನೇ ತರಗತಿಯ 18 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಈ ವಿದ್ಯಾರ್ಥಿಗಳೆಲ್ಲರಿಗೂ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿಕ್ಷಕರು ಸೇರಿದಂತೆ ಶಾಲೆಯ 1,500 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಇದ್ದರೂ, ಅರೋಗ್ಯ ಇಲಾಖೆಗೆ ಮಾಹಿತಿ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.