ಮೈಸೂರು: ಜಿಲ್ಲೆಯಲ್ಲಿಂದು 125 ಹೊಸ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿವೆ. 203 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದಿನ ಸೋಂಕಿತ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 48,056ಕ್ಕೆ ಏರಿಕೆಯಾಗಿವೆ. 203 ಸೇರಿದಂತೆ ಇಲ್ಲಿಯವರೆಗೆ ಒಟ್ಟು 45,658 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,437 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೊನಾದಿಂದ ಜಿಲ್ಲೆಯಲ್ಲಿ ಇಂದು ಯಾವುದೇ ಮೃತಪಟ್ಟ ವರದಿಯಾಗಿಲ್ಲ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 961ಕ್ಕೆ ಏರಿದೆ. ಕೊರೊನಾದಿಂದ ಜಿಲ್ಲೆಯಲ್ಲಿ ಸಂಭವಿಸುತ್ತಿದ್ದ ಸಾವುಗಳ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.