ETV Bharat / state

ಗೃಹಿಣಿ ಮೇಲೆ ಅತ್ಯಾಚಾರ ಆರೋಪ; ಮೈಸೂರಿನಲ್ಲಿ ಡ್ಯಾನ್ಸ್ ಮಾಸ್ಟರ್‌ ಬಂಧನ

ಮೈಸೂರಿನಲ್ಲಿ ಗೃಹಿಣಿ ಮೇಲೆ ಅತ್ಯಾಚಾರ ಎಸಗಿದ ಬ್ಲಾಕ್​ ಮೇಲ್​ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Dec 9, 2023, 9:26 PM IST

ಮೈಸೂರು : ಗೃಹಿಣಿ ಮೇಲೆ ಅತ್ಯಾಚಾರವೆಸಗಿ ಬ್ಲಾಕ್‌ ಮೇಲ್ ಮಾಡಿದ ಆರೋಪದಡಿ ಡ್ಯಾನ್ಸ್​ ಮಾಸ್ಟರ್​ನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. 36 ವರ್ಷದ ಮಹಿಳೆಯೋರ್ವರು ನೀಡಿದ ದೂರಿನ ಮೇರೆಗೆ ಕುವೆಂಪು ನಗರ ನಿವಾಸಿ ಕಾರ್ತಿಕ್ ಉಪಮನ್ಯು ಎಂಬಾತನನ್ನು ಬಂಧಿಸಲಾಗಿದೆ. ಸದ್ಯ ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂತ್ರಸ್ತೆ, ಕಾರ್ತಿಕ್ ನಡೆಸುತ್ತಿದ್ದ ಡ್ಯಾನ್ಸ್ ಕ್ಲಾಸ್‌ಗೆ ನಾನು ಸೇರಿಕೊಂಡಿದ್ದೆ. ನನ್ನ ಕೌಟುಂಬಿಕ ಸಮಸ್ಯೆಯ ಬಗ್ಗೆ ತಿಳಿದುಕೊಂಡು ಸಹಾಯ ಮಾಡುವುದಾಗಿ ಮನೆಗೆ ಬಂದು ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೇ ದುಷ್ಕೃತ್ಯದ ವಿಡಿಯೋ ಮಾಡಿಕೊಂಡಿಕೊಂಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಮಹಿಳೆ ಎಂದು ದೂರಿದ್ದಾರೆ.

ಜೊತೆಗೆ 1.85 ಲಕ್ಷ ರೂ. ಹಣವನ್ನು ನನ್ನ ಬ್ಯಾಂಕ್ ಖಾತೆಯಿಂದ ಹಾಕಿಸಿಕೊಂಡಿದ್ದಾನೆ. ಈ ಬಗ್ಗೆ ನನ್ನ ಪತಿಗೆ ತಿಳಿದ ಮೇಲೆ ಅವರು ನಮ್ಮ ತಂಟೆಗೆ ಬಾರದಂತೆ ಕಾರ್ತಿಕ್‌ಗೆ ಎಚ್ಚರಿಕೆ ನೀಡಿದ್ದರು. ಆದರೂ ಆರೋಪಿ ನನ್ನ ಪತಿಗೂ ಬ್ಲಾಕ್​ ಮೇಲ್​ ಮಾಡುತ್ತಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷಚೇತನ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಶಿಕ್ಷೆ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಮೈಸೂರಿನ ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೈಸೂರು ತಾಲೂಕಿನ ಗ್ರಾಮವೊಂದರ ನಿವಾಸಿ ಶಿಕ್ಷೆಗೊಳಗಾದ ವ್ಯಕ್ತಿ.

ಆರೋಪಿಯು ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ. ಈ ಸಂಬಂಧ ಬಾಲಕಿಯ ಪೋಷಕರು ಮೈಸೂರು ದಕ್ಷಿಣ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶೈಮ ಖರ್ಮೋಜ್ ಅವರು, ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಜೊತೆಗೆ ಸಂತ್ರಸ್ತೆಗೆ 1,05,000 ರೂಪಾಯಿ ಪರಿಹಾರ ನೀಡಬೇಕು ಎಂದು ಆದೇಶಿಸಿದ್ದಾರೆ. ನೊಂದ ಬಾಲಕಿ ಕಾನೂನು ಸೇವಾ ಪ್ರಾಧಿಕಾರದಿಂದ 5 ಲಕ್ಷ ರೂ. ಪರಿಹಾರ ಪಡೆಯಲು ಅರ್ಹಳು ಎಂದು ತಿಳಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ. ಜಯಂತಿ ವಾದ ಮಂಡಿಸಿದ್ದರು.

ಇದನ್ನೂ ಓದಿ : ಹರಾಜಿನಲ್ಲಿ ಕಡಿಮೆ ಬೆಲೆಗೆ ವಾಹನಗಳನ್ನು ಕೊಡಿಸುವುದಾಗಿ ಹೇಳಿ ವಂಚಿಸುತ್ತಿದ್ದ ನಕಲಿ ಪೊಲೀಸ್ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.