ಮೈಸೂರು: ಜಿಲ್ಲೆಯಲ್ಲಿ ವಾಡಿಕೆಯಂತೆ ಮಳೆಯಾಗುತ್ತಿದೆ. ಜೂನ್ನಿಂದ ಇಲ್ಲಿಯವರೆಗೆ 3,200 ಮನೆಗಳಿಗೆ ಹಾನಿಯಾಗಿದೆ. ಅದರಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ 700 ಮನೆಗಳು ತೊಂದರೆಗೊಳಗಾಗಿವೆ. ಆದರೆ, ಪ್ರವಾಹದ ಭೀತಿಯಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಪಿರಿಯಾಪಟ್ಟಣ, ಹುಣಸೂರು, ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕುಗಳಲ್ಲಿ ಅತೀ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಈವರೆಗೆ 21 ಕೋಟಿ ರೂ ಅನುದಾನ ನೀಡಲಾಗಿದೆ. ಮೈಸೂರು ನಗರದಲ್ಲಿ ದಟ್ಟಗಳ್ಳಿ ಕಡೆಯಿಂದ ಲಿಂಗಾಂಬುದಿ ಕೆರೆಗೆ ಹೆಚ್ಚು ನೀರು ಹರಿಯುತ್ತಿದ್ದು, ನೀರು ಹೊರ ಹೋಗಲು ಕ್ರಮ ಕೈಗೊಳ್ಳಲಾಗಿದೆ.
ನಿನ್ನೆ ಮಾವಿನ ಹಳ್ಳಿ ಗ್ರಾಮದಲ್ಲಿ ಮಳೆ ನೀರಿಗೆ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದಾರೆ. ಅವರ ಮನೆಗೆ ನಾನು ಮತ್ತು ಉಸ್ತುವಾರಿ ಸಚಿವರು ನಾಳೆ ಭೇಟಿ ನೀಡಿ, ಪರಿಹಾರ ನೀಡಲಿದ್ದೇವೆ. ಇಲ್ಲಿಯವರೆಗೆ ಶಾಲೆಗಳಿಗೆ ರಜೆ ಘೋಷಿಸಿಲ್ಲ. ಮಳೆ ಹೆಚ್ಚಾದರೆ ಸ್ಥಳೀಯವಾಗಿ ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಹೇಳಿದರು.
ಇದನ್ನೂ ಓದಿ: ಮೈಸೂರಿನಲ್ಲಿ ಕೋಡಿಬಿದ್ದ ಕೆರೆ.. ನೀರಿನಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಮೃತ