ETV Bharat / state

ಫೆ. 20 ರಂದು ತೆರಿಕಲ್ ಗ್ರಾಮದಲ್ಲಿ ಮೈಸೂರು ಡಿಸಿ ಗ್ರಾಮ ವಾಸ್ತವ್ಯ - mysore dc village stay

‘ನಡೆ ಹಳ್ಳಿ ಕಡೆ’ ಎಂಬ ನೂತನ ಕಾರ್ಯಕ್ರಮ ಜಾರಿ ಹಿನ್ನೆಲೆ ಫೆ.20ರಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಿಲ್ಲೆಯ ತೆರಿಕಲ್​ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕೈಗೊಳ್ಳಲಿದ್ದಾರೆ.

mysore dc rohini sindhuri to hold village stay programme
ಮೈಸೂರು ಡಿಸಿ ಗ್ರಾಮ ವಾಸ್ತವ್ಯ
author img

By

Published : Feb 17, 2021, 12:26 PM IST

ಮೈಸೂರು: ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳ ‘ನಡೆ ಹಳ್ಳಿ ಕಡೆ’ ಎಂಬ ನೂತನ ಕಾರ್ಯಕ್ರಮವನ್ನ ಸರ್ಕಾರ ಜಾರಿಗೆ ತಂದಿರುವ ಹಿನ್ನೆಲೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ತೆರಿಕಲ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

ಫೆ.20ರಂದು ಡಿಸಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜಾರಿಗೆ ಬರಲಿದ್ದು, ಅಂದು ಹೂಣಸೂರು ತಾಲೂಕು ಬಿಳಿಕೆರೆ ಹೋಬಳಿಯ ತೆರಿಕಲ್ ಗ್ರಾಮದಲ್ಲಿ ಡಿಸಿ ರೋಹಿಣಿ ಸಿಂಧೂರಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಗ್ರಾಮ ವಾಸ್ತವ್ಯದಲ್ಲಿ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಕಂದಾಯ ಇಲಾಖೆಯನ್ನು ಜನರ ಬಳಿಗೆ ಕೊಡೊಯ್ಯುವ ಉದ್ದೇಶದಿಂದ ಈ ಕಾರ್ಯಕ್ರಮವನ್ನ ಜಾರಿಗೆ ತರಲಾಗಿದೆ. ಹೀಗಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಗ್ರಾಮದಲ್ಲೇ ವಾಸ್ತವ್ಯ ಹೂಡಿ ಜನರ ಸಮಸ್ಯೆಯನ್ನ ಖುದ್ದು ಆಲಿಸಲಿದ್ದಾರೆ. ಇನ್ನು ತೆರಕಲ್ ಗ್ರಾಮದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಸಹ ವಾಸ್ತವ್ಯ ಹೂಡಲಿದ್ದು, ಡಿಸಿ ಗ್ರಾಮ ವಾಸ್ತವ್ಯಕ್ಕೆ ಸಕಲ ಸಿದ್ಧತೆ ನಡೆಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ:ತುಮಕೂರಿನ ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.