ಮೈಸೂರು: ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ಹಾಗೂ ಜಿಮ್ ನಿರ್ಮಾಣ ವಿವಾದದ ಹಿನ್ನೆಲೆಯಲ್ಲಿ ತನಿಖೆ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪಾರಂಪರಿಕ ಕಟ್ಟಡದ ಬಳಿ ಕಾನೂನು ಬಾಹಿರವಾಗಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಜನಪ್ರತಿನಿಧಿಗಳ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್‌ಗೆ ತನಿಖೆ ಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಆದೇಶ ನೀಡಲಾಗಿದೆ.