ಮೈಸೂರು: ಭಾನುವಾರ ರಾತ್ರಿ 12.30 ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸರಿಯಾದ ಸಮಯದಲ್ಲಿ ಬಂದಿದೆಯೇ, ಇಲ್ಲವೋ ಗೊತ್ತಿಲ್ಲ. ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ.
ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ನಾವು ಅಧಿಕೃತವಾಗಿ 250 ಆಕ್ಸಿಜನ್ ಸಿಲಿಂಡರ್ ಭಾನುವಾರ ಮಧ್ಯರಾತ್ರಿಯ ವೇಳೆಗೆ ಕಳಿಸಿರೋದು ದಾಖಲೆಯಲ್ಲಿದೆ. ಮೈಸೂರಿನ ಸೌತ್ರನ್ ಗ್ಯಾಸ್ ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ಚಾಮರಾಜನಗರಕ್ಕೆ ನಿನ್ನೆ ಮಧ್ಯರಾತ್ರಿಯೇ ರವಾನಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ: 23 ರೋಗಿಗಳು ಸಾವು