ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಗುರುವಾರ ಅಧಿಕಾರ ಸ್ವೀಕರಿಸಿದರು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ರಿಂದ ನೂತನ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಡಿಸಿ ಡಾ.ಕೆ.ವಿ. ರಾಜೇಂದ್ರ- ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಬಂದಿರುವುದು ಹೆಮ್ಮೆ ತಂದಿದೆ. ಇಲ್ಲಿನ ಜನ ಹಾಗೂ ಜನಪ್ರತಿನಿಧಿಗಳು ಮೈಸೂರಿನ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ನಿರ್ಗಮಿತ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾತನಾಡಿ, ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಉತ್ತಮವಾಗಿ ಕೆಲಸ ಮಾಡಿದ್ದೇನೆ. ಕೊರೊನಾ, ದಸರಾ ಸಂದರ್ಭದಲ್ಲಿ ಯಶಸ್ವಿಯಾಗಿ ನಿರ್ವಹಿಸಿದ್ದೇನೆ ಎಂದ ತೃಪ್ತಿ ಇದೆ. ಅಭಿವೃದ್ಧಿ ವಿಚಾರದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಜನರು ಸಹಕಾರ ನೀಡಿದ್ದಾರೆ ಎಂದರು.
ನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ, ಜಿಪಂ ಸಿಇಒ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಮಂಜುನಾಥ ಸ್ವಾಮಿ ಇತರೆ ಅಧಿಕಾರಿಗಳು ಇದ್ದರು.
ಇದನ್ನೂ ಓದಿ: ಬಸವಲಿಂಗ ಶ್ರೀ ಆತ್ಮಹತ್ಯೆ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ: ಐಜಿಪಿ