ಮೈಸೂರು : ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕೈ ಕಾರ್ಯಕರ್ತರು ಪ್ರತಿಭಟಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಜಿಡಿಪಿ ವೃದ್ಧಿಯಾಗುತ್ತಿದೆ ಎಂದು ಪ್ರಧಾನಿ ಮೋದಿಯವರು ಹೇಳುತ್ತಾರೆ. ಆದರೆ, ನಿಜವಾಗಿಯೂ ವೃದ್ಧಿಯಾಗಿಲ್ಲ ಜೊತೆಗೆ ಎಲ್ಪಿಜಿ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ ಎಂದು ವ್ಯಂಗ್ಯ ಚಿತ್ರ ಹಿಡಿದು ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.