ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರಿಗೂ ಕೊರೊನಾ ಸೋಂಕು ತಗುಲಿದೆ.
ಎಸ್‌ಪಿ ಕಚೇರಿ ಸಿಬ್ಬಂದಿಯ ಪ್ರಥಮ ಸಂಪರ್ಕದಲ್ಲಿದ್ದ ರಿಷ್ಯಂತ್ ಸೋಮವಾರ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಂಡಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕೊರೊನಾ ದೃಢವಾಗಿದ್ದು, ಸದ್ಯ ರಿಷ್ಯಂತ್ ಮನೆಯಲ್ಲಿಯೇ ಕ್ವಾರಂಟೈನ್ಗೆ ಒಳಗಾಗಿದ್ದಾರೆ.