ಮೈಸೂರು: ಎಂಬಿಎ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳ ಪರಿಶೀಲನೆ ಮಾಡಲು ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಆಗಮಿಸಿದ್ದಾರೆ.
ಲಲಿತಾದ್ರಿಪುರಂ ರಸ್ತೆಯ ನಿರ್ಜನ ಪ್ರದೇಶದಲ್ಲಿ 6 ಮಂದಿ ಕಿರಾತಕರು ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಆಗಮಿಸಿರುವ ಎಡಿಜಿಪಿ ಪ್ರತಾಪ್ ರೆಡ್ಡಿ ಅವರಿಗೆ ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಮಾಹಿತಿ ನೀಡುತ್ತಿದ್ದಾರೆ.
ಆರೋಪಿಗಳ ಸುಳಿವು ಸಿಗದ ಕಾರಣ ಮತ್ತಷ್ಟು ಸಾಕ್ಷಿ ಸಂಗ್ರಹಕ್ಕೆ ಮುಂದಾಗಿರುವ ಪೊಲೀಸರು, ಘಟನಾ ಸ್ಥಳದ ದೂರದಲ್ಲಿ ಬಿಯರ್ ಬಾಟಲ್ಗಳು ಬಿದ್ದಿರುವುದರಿಂದ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತಮುತ್ತಲು ಇರುವ ವೈನ್ಶಾಪ್ಗಳ ಸಿಸಿಟಿವಿ ವಿಡಿಯೋ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದೀಗ ಶೂಟ್ ಔಟ್ ಹಾಗೂ ಗ್ಯಾಂಗ್ರೇಪ್ ಪ್ರಕರಣದಿಂದ ಪೊಲೀಸರಿಗೆ ಒತ್ತಡ ಹೆಚ್ಚಾಗಿದೆ.