ETV Bharat / state

ಮೈಸೂರು ಗ್ಯಾಂಗ್ ರೇಪ್ ಕೇಸ್: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್, 5 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ - ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ

ಅರಮನೆ ನಗರಿ ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಇಂದು ಐದು ಜನ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಏಳು ಮಂದಿ ಆರೋಪಿಗಳ ಪೈಕಿ ಓರ್ವ ಬಾಲಾಪರಾಧಿ ಮತ್ತು ಮತ್ತೋರ್ವನನ್ನು ಇಂದು ಬಂಧಿಸಲಾಗಿದೆ..

mysore-gang-rape-case-five-accused-get-judicial-custody
ಗ್ಯಾಂಗ್ ರೇಪ್ ಪ್ರಕರಣ
author img

By

Published : Sep 7, 2021, 9:35 PM IST

Updated : Sep 7, 2021, 9:55 PM IST

ಮೈಸೂರು : ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐದು ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ಆ.24ರಂದು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದ 7 ಮಂದಿ ಆರೋಪಿಗಳ ಪೈಕಿ ಆರು ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ತೀವ್ರ ವಿಚಾರಣೆ ಬಳಿಕ ಇಂದು ಪೊಲೀಸರು ಆರೋಪಿಗಳನ್ನ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಓದಿ-ಮೈಸೂರು ಗ್ಯಾಂಗ್​ರೇಪ್ ಪ್ರಕರಣ:ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಸಾಧ್ಯತೆ

ಆರು ಮಂದಿ ಬಂಧಿತರಲ್ಲಿ ಐವರು ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ, ಮತ್ತೋರ್ವ ಬಾಲಪರಾಧಿಯಾಗಿದ್ದಾನೆ. ಏಳನೇ ಆರೋಪಿಯನ್ನು ಇಂದು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ‌.

7ನೇ ಆರೋಪಿ ಬಂಧನ:
ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು ರಾತ್ರಿ ಕರೆತಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

Last Updated : Sep 7, 2021, 9:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.