ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸಾವಿನ ಪ್ರಮಾಣ ಹಾಗೂ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.10 ರಷ್ಟಿದೆ. ಇದರ ನಿಯಂತ್ರಣಕ್ಕೆ ಸಲಹೆ ಸೂಚನೆಗಳನ್ನು ನೀಡಿದ್ದೇನೆ ಎಂದು ಸಚಿವ ಡಾ. ಕೆ ಸುಧಾಕರ್ ಹೇಳಿದರು.
ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮೈಸೂರಿನ ಜಿಲ್ಲಾ ಪಂಚಾಯತ್ನಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಎರಡನೇ ಹೆಚ್ಚು ಸೋಂಕಿತರಿರುವ ಜಿಲ್ಲೆಯಾಗಿದೆ. ಸಾವಿನ ಪ್ರಮಾಣವೂ ಸಹ ಹೆಚ್ಚಾಗಿ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಜಿಲ್ಲೆಯ ಅಧಿಕಾರಿಗಳ ಜೊತೆ ಕಳೆದ ಒಂದು ವಾರದಿಂದ ಬಂದಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ದಸರಾ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿಶೇಷವಾಗಿ ಸಾವಿನ ಪ್ರಮಾಣ ತಗ್ಗಿಸಬೇಕು ಎಂದರು.
ಮೈಸೂರು ಜಿಲ್ಲೆಯಲ್ಲಿ ಕೊರೊನಾ ಹರಡಲು ಕಾರಣವೇನು?
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗಲು ಬೇರೆ ಬೇರೆ ಜಿಲ್ಲೆಗಳಿಂದ ಜೊತೆಗೆ ಕೇರಳ ಮತ್ತು ತಮಿಳುನಾಡು ಮೈಸೂರಿಗೆ ಗಡಿಯಾಗಿರುವುದರಿಂದ ಅಲ್ಲಿನ ಜನರು ಇಲ್ಲಿಗೆ ಬಂದಿರುವ ಸಾಧ್ಯತೆ ಇದೆ. ಇಲ್ಲಿನ ನಾಗರೀಕರು ನಿರ್ಲಕ್ಷ್ಯ ವಹಿಸಿದ್ದು ಸಹ ಕೋವಿಡ್ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸಚಿವರು ಹೇಳಿದರು.
ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಕೋವಿಡ್ ಅನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಕ್ಕೆ ಜಿಲ್ಲಾಧಿಕಾರಿಗಳು ಎರಡು ವಾರ ಸಮಯ ಕೇಳಿದ್ದಾರೆ. ಇದಲ್ಲದೆ 33,000 ಆಕ್ಸಿಜನ್ ಬೆಡ್ಗಳನ್ನು ರಾಜ್ಯದ ಆಸ್ಪತ್ರೆಗಳಲ್ಲಿ ಅಳವಡಿಸಲು ತೀರ್ಮಾನಿಸಿಗಿದೆ ಎಂದರು.