ಮೈಸೂರು: ಮಾಜಿ ಸಂಸದ ಸಿ.ಹೆಚ್. ವಿಜಯಶಂಕರ್ಗೆ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಕಾಗಿನೆಲೆ ಶ್ರೀಗಳು ಸಿದ್ದರಾಮಯ್ಯನವರನ್ನ ಭೇಟಿಯಾಗಿ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ಶಾರದ ದೇವಿ ನಗರದಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಕಾಗಿನೆಲೆ ಶೀಗಳು, ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಂಸದ ಸಿ.ಹೆಚ್. ವಿಜಯಶಂಕರ್ ಅವರಿಗೆ ಟಿಕೆಟ್ ನೀಡಬೇಕೆಂದು ಶ್ರೀಗಳು ಸಿದ್ದರಾಮಯ್ಯ ಜೊತೆ ಸುಮಾರು 1 ಗಂಟೆಗೂ ಹೆಚ್ಚು ಕಾಲ ಗೌಪ್ಯ ಮಾತುಕತೆ ನಡೆಸಿದ್ದಾರೆ.
ನಂತರ ಶ್ರೀಗಳು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ನಿರಾಕರಿಸಿ ಹೊರಟು ಹೋದರು.