ETV Bharat / state

2024ರ ಅಂತ್ಯಕ್ಕೆ ಮೈಸೂರು- ಕುಶಾಲನಗರ ಹೆದ್ದಾರಿ ಕಾಮಗಾರಿ ಪೂರ್ಣ: ಸಂಸದ ಪ್ರತಾಪ್ ಸಿಂಹ

author img

By

Published : Jul 17, 2023, 7:22 PM IST

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ಸಂಸದ ಪ್ರತಾಪ್​ ಸಿಂಹ ನಂತರ ಮಾಧ್ಯಮದ ಜೊತೆ ಮಾಹಿತಿ ಹಂಚಿಕೊಂಡರು.

Prathap Simha Meeting at DC office
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಾಪ್​ ಸಿಂಹ ಸಭೆ

ಮೈಸೂರು:‌ ಮೈಸೂರು-ಕುಶಾಲನಗರದ ನಡುವೆ 4,130 ಕೋಟಿ ವೆಚ್ಚದಲ್ಲಿ 93 ಕಿಲೋ ಮೀಟರ್ NH-275 ಹೆದ್ದಾರಿ ಕಾಮಗಾರಿಯನ್ನು ಕೈಗೊಂಡಿದ್ದು, ಪೂರ್ಣಕಾಮಗಾರಿಯು 2024ರ ಡಿಸೆಂಬರ್‌ ಅಂತ್ಯಕ್ಕೆ ಮುಗಿಯಲಿದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮೈಸೂರು-ಕುಶಾಲನಗರ ಹೆದ್ದಾರಿ ವಿಭಾಗದ NH-275 ಯೋಜನೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದ ಅವರು, ಹೆದ್ದಾರಿ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ಕೈಗೆತ್ತಿಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ವಿವಿಧ ರೀತಿಯ ಪ್ಯಾಕೇಜ್‌ಗಳಾಗಿ ವಿಂಗಡಿಸಲಾಗಿದೆ. ಶ್ರೀರಂಗಪಟ್ಟಣದ ಪಾಲಹಳ್ಳಿಯ ಪಿ. ಅಗ್ರಹಾರದಿಂದ ಹುಣಸೂರಿನವೆರಗೆ ಪ್ಯಾಕೇಜ್-4 ಮತ್ತು 5, ಹುಣಸೂರಿನಿಂದ- ಪಿರಿಯಾಪಟ್ಟಣದವರೆಗೆ ಪ್ಯಾಕೇಜ್-3, ಪಿರಿಯಾಪಟ್ಟಣದಿಂದ ಕುಶಾಲನಗರದವರೆಗೆ ಪ್ಯಾಕೇಜ್- 2 ಎಂದು ವಿಭಾಗಿಸಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಕಾವೇರಿ ನೀರಾವರಿ ನಿಗಮ, ರೈಲ್ವೆ ಮತ್ತು ಚೆಸ್ಕಾಂ ಅಧಿಕಾರಿಗಳಿಗೆ ಹೆದ್ದಾರಿಯ ಬ್ಲೂಪ್ರಿಂಟ್ ನೀಡಿ ಜುಲೈ 30 ರೊಳಗೆ ಅನುಮತಿಯನ್ನು ಪಡೆದು ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.

ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹುಣಸೂರು ಪಿರಿಯಾಪಟ್ಟಣ ಮತ್ತು ಕುಶಾಲನಗರ ತಾಲೂಕಿನ ತಹಶೀಲ್ದಾರ್‌ಗಳಿಗೆ ನಿರ್ದೇಶನವನ್ನು ನೀಡಲಾಗಿದೆ. ಹೆದ್ದಾರಿ ನಿರ್ಮಾಣವಾಗುವ ಜಮೀನು ದುರಸ್ತಿ ಮಾಡುವುದರಿಂದ ಪ್ರಸ್ತುತ ಬೆಳೆದಿರುವ ಬೆಳೆಗಳಿಗೆ ಪರಿಹಾರವನ್ನು ನೀಡಲಾಗಿದ್ದು, ಮತ್ತೊಂದು ಅವಧಿಯ ಬೆಳೆಗಳಿಗೆ ಯಾವುದೇ ರೀತಿಯ ಪರಿಹಾರ ದೊರೆಯುವುದಿಲ್ಲ ಎಂದು ಮುಂಚಿತವಾಗಿ ತಿಳಿಸಲಾಗಿದೆ. ಒಟ್ಟು 600 ಕೋಟಿಯಲ್ಲಿ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ತಿಂಗಳ ಅಂತ್ಯದೊಳಗೆ ಉಳಿದ 300 ಕೋಟಿ ಪರಿಹಾರದ ಹಣವನ್ನು ನೀಡಲಾಗುವುದು. ಒಟ್ಟು 1200 ಎಕರೆ ಭೂಮಿಯನ್ನು ಹೆದ್ದಾರಿ ನಿರ್ಮಾಣಕ್ಕೆ ರೈತರಿಂದ ಪಡೆಯಲಾಗಿದ್ದು, ಅವರಿಗೆ ಪರಿಹಾರವನ್ನು ಈ ತಿಂಗಳ 30 ರೊಳಗೆ ನೀಡಲಾಗುವುದು ಎಂದು ಸಂಸದರು ತಿಳಿಸಿದರು.

ಕಾಮಗಾರಿ ಆರಂಭಿಸಲು ಬೇಕಿರುವ ಪೂರ್ವ ತಯಾರಿ ನಡೆದಿದೆ. ಕ್ರಷರ್, ಕ್ವಾರೆಗಳ ಕಾರ್ಯಾರಂಭವಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಲ್ಲಿದೇವೆ. ಕಾಮಗಾರಿ ಪೂರ್ಣಗೊಳಿಸಲು 24 ತಿಂಗಳು ಅವಕಾಶವಿದ್ದು, 2024ರ ದಸರಾ ಮುಂಚಿತವಾಗಿ ಕಾಮಗಾರಿ ಪೂರ್ಣಗೊಳಿಸುವ ಗುರಿಯಿದೆ. ಕಾಮಗಾರಿಯನ್ನು ಸವಾಲಾಗಿ ಸ್ಪೀಕರಿಸಿ, 12 ರಿಂದ 14 ತಿಂಗಳ ಅವಧಿಯಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ, 2024 ಡಿಸೆಂಬರ್‌ಗೆ ಮೈಸೂರು ಕುಶಾಲನಗರ ಹೆದ್ದಾರಿ ಲೋಕಾರ್ಪಣೆ ಗುರಿಯನ್ನು ಹೊಂದಿದ್ದೇವೆ. ಮೈಸೂರು-ಕುಶಾಲನಗರ ಹೆದ್ದಾರಿ ನಿರ್ಮಾಣದಿಂದಾಗಿ ಮೈಸೂರು ನಗರದಲ್ಲಿನ ಟ್ರಾಫಿಕ್ ಸಮಸ್ಯೆ ಕಡಿಮೆಯಾಗುವುದು. ಮಡಿಕೇರಿ ಮಾರ್ಗವಾಗಿ ಕೇರಳ ಕಡೆ ಸಂಚರಿಸುವ ವಾಹನಗಳಿಗೆ ಉಪಯುಕ್ತವಾಗುವುದು ಎಂದರು.

ಮೈಸೂರು ಹೊರವರ್ತುಲ ರಸ್ತೆಗೆ ಸಂಬಂಧಿಸಿದಂತೆ ಮಾತನಾಡಿ, ರಸ್ತೆ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು, ಬ್ಲೂ ಪ್ರಿಂಟ್ ನಿರ್ಮಾಣವಾಗುತ್ತಿದೆ. ಮುಂದಿನ ದಿನಗಳಲ್ಲಿ ನಂಜನಗೂಡು, ಊಟಿ, ಟಿ ನರಸೀಪುರ, ಕ್ಯಾಲಿಕಟ್, ಚಾಮರಾಜನಗರ, ಬಂಡೀಪುರ, ನಾಗರಹೊಳೆ ಮಾರ್ಗವಾಗಿ ಚಲಿಸುವವವರು ಕಳಸವಾಡಿಯಿಂದ ರಿಂಗ್‌ರೋಡ್ ಮೂಲಕ ಸಂಚರಿಸಲು ಅವಕಾಶವನ್ನು ಕಲ್ಪಿಸಲಾಗುವುದು. ಅರಮನೆ ನಗರಿ ಮೈಸೂರನ್ನು ಸುರಕ್ಷವಾಗಿ ಕಾಯ್ದುಕೊಳುವುದು, ನಗರದಲ್ಲಿ ಹೆಚ್ಚಿನ ವಾಹನ ದಟ್ಟಣೆಯಾಗದಂತೆ ನೋಡಿಕೊಳ್ಳುವುದು ನಮ್ಮ ನಿಲುವಾಗಿದೆ ಎಂದು ತಿಳಿಸಿದರು.

ಮಡಿಕೇರಿ ಮೂಲಕ ಮಂಗಳೂರಿಗೆ ಸಂಚರಿಸಲು ಅವಕಾಶವಾಗುವಂತೆ ಬೆಂಗಳೂರು- ಮಂಗಳೂರು ಹೆದ್ದಾರಿಗಿಂತ ಉತ್ತಮವಾದ ರಸ್ತೆಯನ್ನು ನಿರ್ಮಿಸಲಾಗುವುದು. ಹುಣಸೂರು ಪಿರಿಯಾಪಟ್ಟಣದಲ್ಲಿ ಕೈಗಾರಿಕೆಗಳು ನಿರ್ಮಾಣವಾಗುವ ಸಾಧ್ಯತೆಯಿದ್ದು, ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆಯು ಇದಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ, ಹೆದ್ದಾರಿ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ಟೀಕೆ ಮಾಡುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ದಾರಿ ಮಾಡಿಕೊಟ್ಟ ಸಿಎಂ​: ಬಿ ವೈ ವಿಜಯೇಂದ್ರ ಟೀಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.