ETV Bharat / state

ಮೈಸೂರು: ಹಾಡುಹಗಲೇ ಗೃಹಿಣಿಯ ಬರ್ಬರ ಹತ್ಯೆ - ಮಹಿಳೆಯನ್ನು ದರೋಡೆಕೋರರು ಹತ್ಯೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ, ಕಲಾವತಿ ಎಂಬ ಮಹಿಳೆಯನ್ನು ದರೋಡೆಕೋರರು ಹತ್ಯೆ ಮಾಡಿದ್ದಾರೆ

murder of housewife in day
ಗೃಹಿಣಿಯ ಬರ್ಬರ ಹತ್ಯೆ
author img

By

Published : Feb 3, 2020, 2:32 PM IST

ಮೈಸೂರು: ಹಾಡುಹಗಲೇ ಗೃಹಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿ ದರೋಡೆ ನಡೆಸಿರುವ ಘಟನೆ ಪಿರಿಯಾಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ನಡೆದಿದೆ.

ಜಿಲ್ಲೆಯ ಪಿರಿಯಾಪಟ್ಟಣದ ಬ್ರಾಹ್ಮಣ ಬೀದಿಯ ಕಲಾವತಿ ಹತ್ಯೆಗೀಡಾದ ಮಹಿಳೆ. ಈಕೆ ಇಂದು ಬೆಳಗ್ಗೆ ಮನೆಯಲ್ಲಿ ಒಬ್ಬರೇ ಇದ್ದಾಗ ದರೋಡೆಕೋರರು ನುಗ್ಗಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೊಲೆಯಾದ ಮಹಿಳೆ ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಆಸ್ಪತ್ರೆ ಮುಂದೆ ಪ್ರತಿಭಟನೆ

ಆಸ್ಪತ್ರೆ ಮುಂದೆ ಪ್ರತಿಭಟನೆ: ಪಿರಿಯಾಪಟ್ಟಣದಲ್ಲಿ ಇತ್ತೀಚೆಗೆ ಕಳ್ಳತನ, ದರೋಡೆ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗಿವೆ. ಇದಕ್ಕೆ ಪೊಲೀಸರ ವೈಫಲ್ಯವೇ ಕಾರಣ ಎಂದು ಖಂಡಿಸಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಯ ಮುಖಂಡರು ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಗೃಹ ಸಚಿವರು ಆಗಮಿಸಬೇಕು ಎಂದು ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು.‌ ಹಾಡುಹಗಲೇ ಈ ರೀತಿಯ ಕೃತ್ಯ ನಡೆದಿರುವುದು ಪಿರಿಯಾಪಟ್ಟಣದ ನಾಗರಿಕರನ್ನು ಬೆಚ್ಚಿಬೀಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.