ಮೈಸೂರು : ನಾಳೆಯಿಂದ ಪ್ರವಾಸಿಗರಿಗೆ ಮೈಸೂರು ಅರಮನೆ ವೀಕ್ಷಣೆಗೆ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ತೆರೆಯಲಾಗುವುದು. ಪ್ರವಾಸಿಗರು ಅರಮನೆಯ ವೆಬ್ಸೈಟ್ ಆದ www.mysorepalace.gov.inನಲ್ಲಿ ಆನ್ಲೈನ್ ಮೂಲಕ ಹಾಗೂ ಅರಮನೆಯ ದ್ವಾರಗಳಲ್ಲಿರುವ ಕೌಂಟರ್ನಲ್ಲಿಯೂ ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ.
ಪ್ರವಾಸಿಗರಿಗೆ ಅರಮನೆಯ ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ಉಪಯೋಗಿಸಲು ವ್ಯವಸ್ಥೆ ಮಾಡಲಾಗಿದೆ. ಅರಮನೆ ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ಕೌಂಟರ್‌ನಲ್ಲಿ ಪ್ರವಾಸಿಗರ ನಡುವೆ ಅಂತರ ಕಾಯ್ದುಕೊಳ್ಳಲು ಗುರುತು ಹಾಕಲಾಗಿದೆ. ಸಾಮಾಜಿಕ ಅಂತರ ಪಾಲಿಸಬೇಕು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.
ಪ್ರವಾಸಿಗರ ಮೇಲೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಅರಮನೆ ಆವರಣದಲ್ಲಿ ಸೂಚನಾ ಫಲಕ ಅಳವಡಿಸಲಾಗಿದೆ. ಪ್ರವಾಸಿಗರು ಸರ್ಕಾರ ನೀಡುವ ಆದೇಶವನ್ನು ಪಾಲಿಸುವಂತೆ ಹಾಗೂ ಲಗೇಜ್‌ಗಳನ್ನು ತರದೆ ಅರಮನೆ ಮಂಡಳಿಗೆ ಸಹಕಾರ ನೀಡಬೇಕೆಂದು ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೃಗಾಲಯ ಓಪನ್ : ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ನಾಳೆಯಿಂದ ತೆರೆಯಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂಜನಗೂಡು ದೇವಸ್ಥಾನ ಓಪನ್ : ಕೇಂದ್ರ ಪುರಾತತ್ವ ಇಲಾಖೆ ಸೂಚನೆ ಹಾಗೂ ಲಾಕ್‌ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 16ರಂದು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ದೇವಸ್ಥಾನವನ್ನು ಮುಚ್ಚಲಾಗಿತ್ತು. ಆದರೆ, 75 ದಿನಗಳ ಬಳಿಕ ನಂಜನಗೂಡು ದೇವಸ್ಥಾನ ಒಪನ್ ಆಗುತ್ತಿದ್ದು, ಆದ್ದರಿಂದ ಭಾನುವಾರ ದೇವಸ್ಥಾನ ಆವರಣದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.
ಇದನ್ನೂ ಓದಿ : ನಾಳೆಯಿಂದ ರಾಜ್ಯದಲ್ಲಿ ದೇವಾಲಯಗಳು ಓಪನ್: ಎಲ್ಲೆಡೆ ಸ್ಯಾನಿಟೈಸಿಂಗ್ ಕಾರ್ಯ