ಮೈಸೂರು: ನೈಟ್ ಕರ್ಫ್ಯೂ ಉಲ್ಲಂಘಿಸಿ ಪಾರ್ಟಿ ಮಾಡುತ್ತಿದ್ದ ಆರೋಪದಡಿ 8 ಮಂದಿಯನ್ನು ವಿಜಯನಗರ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೆಲ ದಿನಗಳಿಂದ ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ಸರ್ಕಾರ 8 ನಗರಗಳಲ್ಲಿ ಶನಿವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ.
ಆದರೆ ಇಲ್ಲಿನ ವಿಜಯನಗರದಲ್ಲಿರುವ ಕರಣ್ ರೆಸಿಡೆನ್ಸಿಯಲ್ಲಿ ಯುವಕರು ರಾತ್ರಿ 12 ಗಂಟೆಯಾದರೂ ಪಾರ್ಟಿ ಮಾಡುತ್ತಿದ್ದರು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ವಿಜಯನಗರ ಠಾಣಾ ಪೊಲೀಸರು 8 ಜನರನ್ನು ಬಂಧಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ವೇಳೆ ಮದ್ಯದ ಬಾಟಲಿಗಳನ್ನು ಸಹ ವಶಕ್ಕೆ ಪಡೆದಿದ್ದಾರೆ.