ETV Bharat / state

ಮೈಸೂರಲ್ಲಿ ಒಂಟಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ; ದಾಳಿ ವೇಳೆ ನಾಲ್ವರು ಯುವತಿಯರ ರಕ್ಷಣೆ - ವೇಶ್ಯಾವಾಟಿಕೆ ನಡೆಸುತ್ತಿದ್ದವರ ಮೇಲೆ ದಾಳಿ

ಮೈಸೂರಿನಲ್ಲಿ ಒಂಟಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ - ಪೊಲೀಸರಿಂದ ದಾಳಿ - ನಾಲ್ವರು ಯುವತಿಯರ ರಕ್ಷಣೆ

Mysore police rescued four girls who are trapped to prostitution

author img

By

Published : Jul 12, 2022, 12:40 PM IST

ಮೈಸೂರು: ನಗರದ ಹೊರವಲಯದ ಒಂಟಿ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಜಾಲದ ಮೇಲೆ ಇಲ್ಲಿಯ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ನಾಲ್ವರು ಅಂತಾರಾಜ್ಯ ಯುವತಿಯರನ್ನು ರಕ್ಷಣೆ ಮಾಡಲಾಗಿದ್ದು, ಐವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ನಗರದ ಹೊರವಲಯದಲ್ಲಿರುವ ಶಾಂತವೇರಿ ಗೋಪಾಲಗೌಡ ಬಡಾವಣೆಯಲ್ಲಿ ಒಂಟಿ ಮನೆಯನ್ನು ಬಾಡಿಗೆ ಪಡೆದು, ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಸ್ಥಳೀಯ ಒಡನಾಡಿ ಸೇವಾ ಸಂಸ್ಥೆಯು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದಿತ್ತು.

ಮಾಹಿತಿ ತಿಳಿದ ತಕ್ಷಣ ದಾಳಿ ನಡೆಸಿದ ಪೊಲೀಸರು ದಂಧೆಯಲ್ಲಿದ್ದ ಪಂಜಾಬ್, ಅಸ್ಸೋಂ ಮತ್ತು ಕರ್ನಾಟಕದವರೂ ಸೇರಿ ಒಟ್ಟು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೇ 5 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಹೊರ ರಾಜ್ಯದಿಂದ ಬರುವ ಜನರನ್ನೇ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು ಎಂದು ದಾಳಿ ವೇಳೆ ಗೊತ್ತಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.