ಮೈಸೂರು: ಕರ್ತವ್ಯನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಎನ್.ಟಿ.ಎಂ.ಸಿ ಶಾಲೆಯ ವೃತ್ತದ ಬಳಿ ನಡೆದಿದೆ.
ದೇವರಾಜ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಂಜುನಾಥ್ ಅವರ ಮೇಲೆ, ರೌಡಿಶೀಟರ್ಗಳಾದ ಸೋಮಶೇಖರ್, ಚಂದ್ರಶೇಖರ್ ಹಾಗೂ ಇವರ ಸಹೋದರಿ ಲತಾ ಎಂಬುವರು ಹಲ್ಲೆ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ವ್ಯಕ್ತಿವೋರ್ವರು ಈ ವಿಡಿಯೋವನ್ನು ಸೆರೆ ಹಿಡಿದು ವೈರಲ್ ಮಾಡಿದ್ದಾರೆ.
ಹಲ್ಲೆ ನಡೆಸಲು ಕಾರಣವೇನು:
ರಾತ್ರಿ 11 ಗಂಟೆಯಾದರೂ ಅಂಗಡಿ ಬಾಗಿಲು ಮುಚ್ಚದೇ ಲತಾ ಅವರು ವ್ಯಾಪಾರ ನಡೆಸುತ್ತಿದ್ದರು. ಇದನ್ನು ಮಂಜುನಾಥ್ ಅವರು ಗಮನಿಸಿ ಅಂಗಡಿ ಮುಚ್ಚುವಂತೆ ಸೂಚನೆ ನೀಡಿದ್ದಾರೆ. ಅದನ್ನು ನಿರ್ಲಕ್ಷಿಸಿ ಪೊಲೀಸ್ ಪೇದೆಯ ಮೇಲೆ ಸಾರ್ವಜನಿಕ ಸ್ಥಳದಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗ್ತಿದೆ.
ಈ ಸಂಬಂಧ ಪೇದೆ ಮಂಜುನಾಥ್ ಅವರು ದೇವರಾಜ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಹಲ್ಲೆ ಬಗ್ಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ನಡೆಸಿದ ಚಂದ್ರಶೇಖರ್ನನ್ನು ಬಂಧಿಸಿದ್ದಾರೆ. ರೌಡಿಶೀಟರ್ ಸೋಮಶೇಖರ್ ಮತ್ತು ಅವನ ಸಹೋದರಿ ಲತಾ ಪರಾರಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.