ಮೈಸೂರು: ಮೊಬೈಲ್ ಹೆಚ್ಚಾಗಿ ನೋಡಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎನ್.ಆರ್.ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ನಡೆದಿದೆ.
ನಿಕಾನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ದ್ವೀತಿಯ ಪಿಯುಸಿ ಓದುತ್ತಿದ್ದಳು. ಈ ವಿದ್ಯಾರ್ಥಿನಿ ಮನೆಯಲ್ಲಿ ಮೊಬೈಲ್ ಚಾಟೀಂಗ್ನಲ್ಲೇ ತೊಡಗುತ್ತಿದ್ದಳು. ಇದನ್ನು ಕಂಡ ತಾಯಿ ಹೆಚ್ಚಾಗಿ ಮೊಬೈಲ್ ನೋಡಬೇಡ, ಓದಿನ ಕಡೆಯೂ ಗಮನ ಕೊಡು ಎಂದು ಬುದ್ಧಿವಾದ ಹೇಳಿದ್ದಾರೆ. ಆದರೆ ಈ ವಿದ್ಯಾರ್ಥಿನಿ ಇದರಿಂದ ಮನನೊಂದು ತನ್ನ ಕೊಠಡಿಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಈ ಸಂಬಂಧ ಎನ್.ಆರ್.ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.