ಮೈಸೂರು: ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 49ಕ್ಕೇರಿದೆ.
52 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ 303), 38 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ311), 26 ವರ್ಷದ ಮಹಿಳೆ (ರೋಗಿ ಸಂಖ್ಯೆ 312). ಇಬ್ಬರು ಪುರುಷರು ಜುಬಿಲಂಟ್ ನೌಕರರಾಗಿದ್ದರು.
ಮಹಿಳೆಗೆ ಪತಿ ಸಂಪರ್ಕದಿಂದ ಸೋಂಕು ತಗುಲಿದೆ. ಒಟ್ಟಾರೆ ಮೈಸೂರಿನಲ್ಲಿ 61 ಪ್ರಕರಣ ದಾಖಲಾಗಿದ್ದು, ಅದರಲ್ಲಿ 12 ಜನ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 49 ಸಕ್ರಿಯ ಪ್ರಕರಣಗಳು ಇವೆ.