ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಗೆ 1.06 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೆ ನಡೆದಿರುವ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ಕೆ-ಸೆಟ್ ಪರೀಕ್ಷೆಯಲ್ಲಿ ದಾಖಲೆಯ ಅಭ್ಯರ್ಥಿ ಅರ್ಜಿ ಸಲ್ಲಿಸಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗದ ಸುಪರ್ದಿಯಲ್ಲಿ ನಡೆಯುವ ಈ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಗಿದಿದೆ. ಮೈಸೂರು ವಿವಿ ನೋಡೆಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, 2019 ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗೆ ಯುಜಿಸಿ ಮಾನ್ಯತೆ ನೀಡುವುದು ತಡವಾಗಿದ್ದರಿಂದ, ಈಗ ಪರೀಕ್ಷೆ ಆಯೋಜಿಸಲಾಗಿದೆ.
ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ 11 ನೋಡೆಲ್ ಕೇಂದ್ರಗಳಲ್ಲಿ ಏಪ್ರಿಲ್ 12 ರಂದು ಪರೀಕ್ಷೆ ನಡೆಯುತ್ತದೆ. ಈ ಮಧ್ಯೆ ಕೊರೊನಾ ಭೀತಿಯಿರುವುದರಿಂದ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳ ಅಧಿಕಾರಿಗಳೊಡನೆ ಸಭೆ ನಡೆಸಲಾಗಿದ್ದು, ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ, ಈ ಪರೀಕ್ಷೆ ನಿಗದಿಯಾದ ದಿನಾಂಕ ಬಿಟ್ಟರೆ ಮತ್ತೆ ಇನ್ನು 2-3 ತಿಂಗಳು ಪರೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ ಎಂದು ವಿವಿಯ ಕೆ-ಸೆಟ್ ಸಂಯೋಜಕ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ.