ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಶತಮಾನೋತ್ಸವದಲ್ಲಿ ಪ್ರಧಾನಿ ಮೋದಿ ಆನ್ಲೈನ್ನಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ 100ನೇ ವಾರ್ಷಿಕ ಘಟಿಕೋತ್ಸವವನ್ನು ದಿನಾಂಕ 19.10.2020 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಮೈಸೂರು ವಿವಿಯ ಕ್ರಾಫರ್ಡ್ನಲ್ಲಿ ನಡೆಯಲಿದೆ. ಈ ಬಾರಿ ವರ್ಚುವಲ್ ವಿಭಾಗದಲ್ಲಿ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಶ್ರೀ ವಜುಭಾಯ್ ವಾಲಾ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶತಮಾನೋತ್ಸವದ ಘಟಿಕೋತ್ಸವದ ಭಾಷಣವನ್ನು ಆನ್ಲೈನ್ನಲ್ಲಿಯೇ ಮಾಡಲಿದ್ದಾರೆ. ಈ ಘಟಿಕೋತ್ಸವದಲ್ಲಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಉಪಸ್ಥಿತರಿರುತ್ತಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲ ಸಚಿವರು ತಿಳಿಸಿದ್ದಾರೆ.