ಮೈಸೂರು: ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಮೈಸೂರಿನಲ್ಲಿ ಸಮುದಾಯ ಆರೋಗ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಅವರು ಇಂದು ಕೋವಿಡ್ ಗೆ ಬಲಿಯಾಗಿದ್ದಾರೆ.
ತಿ. ನರಸೀಪುರ ಪಟ್ಟಣದ ನಿವಾಸಿಯಾಗಿರುವ ಚಂದ್ರಶೇಖರ್ (32) ಅವರು, ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಕೋವಿಡ್ ಸೋಂಕಿತರ ಪತ್ತೆ ತಂಡದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಿದ ಚಂದ್ರಶೇಖರ್, ಕುಸಿದು ಬಿದಿದ್ದಾರೆ. ಕುಟುಂಬಸ್ಥರು ತಕ್ಷಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆ ತರುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಇನ್ನು ಅವರ ಕೊರೊನಾ ವರದಿ ಪಾಸಿಟಿವ್ ಬಂದಿದ್ದು, ಅಂತ್ಯಕ್ರಿಯೆ ಇಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್‌ಗಳಾಗಿ ದುಡಿಯುತ್ತಿರುವವರ ಪೈಕಿ ಈಗಾಗಲೇ ಮೂವರು ಪೊಲೀಸರು, ಇಬ್ಬರು ವೈದ್ಯರು, ಮೂವರು ಪೌರಕಾರ್ಮಿಕರು ಮೃತಪಟ್ಟಿದ್ದಾರೆ.