ETV Bharat / state

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು: ಸಚಿವ ಎಸ್.ಟಿ.ಸೋಮಶೇಖರ್ - Mysure teachers day celebration

ಮೈಸೂರು ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

teachers day
teachers day
author img

By

Published : Sep 5, 2020, 4:10 PM IST

ಮೈಸೂರು: ಅಜ್ಞಾನದ ಅಂಧಕಾರ ತೊಲಗಿಸಿ ಜ್ಞಾನದ ಬೆಳಕನ್ನು ನೀಡುವಲ್ಲಿ ಗುರುತರ ಜವಾಬ್ದಾರಿ ಇರುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಸಿದ್ಧಾರ್ಥ ನಗರದಲ್ಲಿರುವ ಟೆರಿಷಿಯನ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ದೇಶದ ಪರಂಪರೆಯಲ್ಲಿ ಗುರು ಎಂಬ ಪದಕ್ಕೆ ವಿಶೇಷವಾದ ಅರ್ಥವಿದೆ. ಇಂದಿನ ವಿದ್ಯಮಾನದಲ್ಲಿ ಶಿಕ್ಷಕರು ಪಠ್ಯಕ್ಕೆ ಸೀಮಿತವಾಗದೇ, ಪಠ್ಯೇತರ ಚಟುವಟಿಕೆಗಳ ಜೊತೆಗೆ ಮಾನವೀಯ ಮೌಲ್ಯಗಳನ್ನು ಬಿತ್ತುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಿದೆ ಎಂದು ಶಿಕ್ಷಕರಿಗೆ ಸಲಹೆ ನೀಡಿದರು.

ಕೋವಿಡ್-19 ಬಿಕ್ಕಟ್ಟಿನಲ್ಲಿಯೂ ಜಿಲ್ಲೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿರುವುದು ಅತ್ಯಂತ ಶ್ಲಾಘನೀಯ. ಈ ತಂಡದಲ್ಲಿ ಶ್ರಮಿಸಿದ ಅಧಿಕಾರಿಗಳು ಹಾಗೂ ಶಿಕ್ಷಕರ ಪಾತ್ರ ಅವಿಸ್ಮರಣೀಯ. ಸರ್ಕಾರವು ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಹೀಗಾಗಿ ಕಲಿಕೆಯಿಂದ ಯಾವುದೇ ಮಕ್ಕಳು ವಂಚಿತರಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಮಾತನಾಡಿ, ಕೋವಿಡ್-19 ಸಂಕಷ್ಟ ಕಾಲದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಸುವ ಸಲುವಾಗಿ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಈ ಕೆಲಸವು ಸರ್ಕಾರದ ಗಮನ ಸೆಳೆದಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಈ ಬಾರಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಅದರ ಸಾಕಾರಕ್ಕಾಗಿ ಪ್ರತಿಯೊಬ್ಬ ಶಿಕ್ಷಕರು ಹೆಚ್ಚಿನ ಸಿದ್ಧತೆ ಹಾಗೂ ತರಬೇತಿಯನ್ನು ಪಡೆಯಬೇಕಿದೆ. ಶಿಕ್ಷಣ ಇಲಾಖೆ ನೀಡುವ ಪ್ರಶಸ್ತಿ ಹೊರತಾಗಿಯೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ಮತ್ತು ಕೌಶಲ್ಯವನ್ನು ಧಾರೆ ಎರೆಯುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ 26 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.