ETV Bharat / state

ಮೈಸೂರು: ಜನ, ಜಾನುವಾರುಗಳ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ

author img

By

Published : Aug 7, 2020, 3:38 PM IST

ಪ್ರವಾಹ ಮತ್ತು ಕೊವೀಡ್ ನಿರ್ವಹಣೆ ಕುರಿತು ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ತಾಲೂಕ್ ಟಾಸ್ಕ್ ಫೋರ್ಸ್ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

Meeting
Meeting

ಮೈಸೂರು: ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ ಜನ ಮತ್ತು ಜಾನುವಾರುಗಳ ರಕ್ಷಣೆಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ಮತ್ತು ಕೊವೀಡ್ ಹಿನ್ನೆಲೆಯಲ್ಲಿ ವಿಕೋಪ ನಿರ್ವಹಣೆ ಕುರಿತು ಮೈಸೂರು ಜಿಲ್ಲಾ ಪಂಚಾಯತ್ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ತಾಲೂಕ್ ಟಾಸ್ಕ್ ಫೋರ್ಸ್ ಅಧಿಕಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಮುಂದಿನ ಒಂದೆರೆಡು ವಾರಗಳ ಕಾಲ ಹೆಚ್ಚಿನ ಮಳೆಯಾಗುವ ಮಾಹಿತಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮವಹಿಸಬೇಕು ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಎಲ್ಲಾ ತಾಲೂಕುಗಳಿಗೂ ನೋಡೆಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಅವರು ತಾಲೂಕುಗಳಿಗೆ ಭೇಟಿ ನೀಡುತ್ತಿರಬೇಕು. ಜನರಿಗೆ ಪರಿಹಾರ ಕೇಂದ್ರ, ಜಾನುವಾರುಗಳಿಗೆ ಗೋಶಾಲೆಗಳನ್ಬು ತೆರೆಯಬೇಕು ಎಂದರು.

ಹಿಂದಿನ ವರ್ಷ ನೀರು ನುಗ್ಗಿದ ಪ್ರವಾಹ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಿ. ಸ್ಥಳೀಯ ಶಾಸಕರು, ಸಂಸದರಿಗೆ ಮಾಹಿತಿ ನೀಡಿ ಸಹಕಾರ ಪಡೆಯಬೇಕು. ಬೆಳೆ ಹಾನಿ, ಆಸ್ತಿ ಹಾನಿಯಾದರೆ ಸಮೀಕ್ಷೆ ನಡೆಸಿ ನಿಖರವಾದ ವರದಿ ಪಡೆಯಬೇಕು. ಗಾಳಿ ಮಳೆಗೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು ಹಾನಿಯಾಗುತ್ತವೆ. ಇದನ್ನು ತಕ್ಷಣ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಸೂಚನೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮುನ್ನೆಚ್ಚರಿಕೆಯಾಗಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ವಿಕೋಪ ನಷ್ಟಕ್ಕೆ ಕಳೆದ ವರ್ಷ ನೀಡಿದಂತೆ ಪರಿಹಾರ ಮೊತ್ತ ನೀಡಲು ಸೂಚನೆ ಬಂದಿದೆ‌. ಕಬಿನಿ, ಕಾವೇರಿ ಮತ್ತು ಲಕ್ಷ್ಮಣ ತೀರ್ಥ ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಆಗಸ್ಟ್ 1 ರಿಂದ ಈವರೆಗೆ ಜಿಲ್ಲೆಯಲ್ಲಿ 66 ಮನೆಗಳಿಗೆ ಹಾನಿಯಾಗಿದೆ‌. ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿ‌.ಇ.ಒ ಪ್ರಶಾಂತ್ ಕುಮಾರ್ ಮಿಶ್ರಾ, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಬಿ‌.ಎಸ್.ಮಂಜುನಾಥಸ್ವಾಮಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.