ಮೈಸೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ಎಲ್ಲ ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಈ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದ್ದು, ಲೈಂಗಿಕ ಕಿರುಕುಳ ಆರೋಪದ ಮೇಲೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ: ಮೈಸೂರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.. ಆರೋಪಿಗಳ ಬಂಧನಕ್ಕೆ ಸಿಎಂ ಸೂಚನೆ
ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ. ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದು, ಯುವತಿಯ ಜೊತೆಯಿದ್ದ ಯುವಕನಿಂದಲೂ ಮಾಹಿತಿ ಪಡೆದಿದ್ದೇವೆ ಎಂದರು.