ETV Bharat / state

ಮೈಸೂರು: ಅತ್ಯಾಚಾರ ಅಪರಾಧಿಗೆ ದಂಡಸಮೇತ 10 ವರ್ಷ ಜೈಲು ಶಿಕ್ಷೆ - ​ ETV Bharat Karnataka

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮೈಸೂರಿನ ನ್ಯಾಯಾಲಯ ಜೈಲು ಶಿಕ್ಷೆ ಪ್ರಕಟಿಸಿದೆ.

ಮೈಸೂರು ಜಿಲ್ಲಾ ನ್ಯಾಯಾಲಯ
ಮೈಸೂರು ಜಿಲ್ಲಾ ನ್ಯಾಯಾಲಯ
author img

By ETV Bharat Karnataka Team

Published : Dec 5, 2023, 9:32 PM IST

ಮೈಸೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಅಪರಾಧಿಗೆ 10 ವರ್ಷಗಳ ಕಠಿಣ ಸೆರೆಮನೆ ವಾಸ ಹಾಗೂ 35 ಸಾವಿರ ರೂಪಾಯಿ ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ತೀರ್ಪು ನೀಡಿದೆ. ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದ ಸಲ್ಮಾನ್ ಖಾನ್ (20) ಶಿಕ್ಷೆಗೆ ಗುರಿಯಾದ ವ್ಯಕ್ತಿ.

ಈತ ಅದೇ ಗ್ರಾಮದ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ನಡೆಸಿದ್ದರಿಂದ, ಸಂತ್ರಸ್ತೆ ಗರ್ಭಿಣಿಯಾಗಿದ್ದರು. ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಂತರ ಆರೋಪಿ ಮದುವೆಗೆ ನಿರಾಕರಿಸಿ ವಂಚಿಸಿದ್ದು ಸಂತ್ರಸ್ತೆ ಹುಣಸೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ತನಿಖಾಧಿಕಾರಿ ಕೆ.ಸಿ.ಪೂವಯ್ಯ ಪ್ರಕರಣದ ತನಿಖೆ ನಡೆಸಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪೂರಕ ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಎಂ.ರಮೇಶ್ ಅಪರಾಧಿಗೆ ಐಪಿಸಿ ಕಲಂ 376(2) (ಎನ್) ರೀತ್ಯಾ ದಂಡಸಮೇತ ಜೈಲು ಸಜೆ ವಿಧಿಸಿದ್ದಾರೆ. ದಂಡ ಮೊತ್ತದ 35 ಸಾವಿರ ರೂಪಾಯಿಗಳ ಪೈಕಿ 30 ಸಾವಿರ ರೂಪಾಯಿಗಳನ್ನು ಸಂತ್ರಸ್ತೆಗೆ ಪರಿಹಾರವನ್ನಾಗಿ ನೀಡುವಂತೆ, 5 ಸಾವಿರ ರೂಪಾಯಿಗಳನ್ನು ಸರಕಾರಕ್ಕೆ ದಂಡವಾಗಿ ಪಾವತಿಸುವಂತೆ ಆದೇಶಿಸಿದ್ದಾರೆ.

ಸಂತ್ರಸ್ತೆಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕಾನೂನಾತ್ಮಕ ಪರಿಹಾರ ನೀಡುವಂತೆ ಮೈಸೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಲಾಗಿದೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಕೆ.ನಾಗರಾಜ ವಾದ ಮಂಡಿಸಿದ್ದಾರೆ.

ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ: ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪುತ್ತೂರು ಪೊಲೀಸರು ಆರ್ಯಾಪು ಗ್ರಾಮದ ಯುವಕನನ್ನು ಬಂಧಿಸಿದ್ದರು. ಹಾಸನ ಜಿಲ್ಲೆಯವರಾದ ಸಂತ್ರಸ್ತೆ ನವೆಂಬರ್ 24ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ ಆರೋಪಿ ಪರಿಚಯ ಮಾಡಿಕೊಂಡಿದ್ದನು. ಬಳಿಕ ಆಕೆಗೆ ಮದ್ಯ ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಪುತ್ತೂರು ನಗರ ಠಾಣೆಯಲ್ಲಿ ನವೆಂಬರ್ 25ರಂದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹಾವೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.