ETV Bharat / state

Mysore Gangrape ಪ್ರಕರಣ: ಪೊಲೀಸರಿಗೆ 34 ಸಾಕ್ಷ್ಯಗಳು ದೊರೆತಿವೆ ಎಂದ ಮಹಿಳಾ ಆಯೋಗದ ಅಧ್ಯಕ್ಷೆ

ಮೈಸೂರಿನ ಲಲಿತಾದ್ರಿಪುರ ಬಳಿ ಅತ್ಯಾಚಾರ ನಡೆದ ಸ್ಥಳಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

mysuru-gangrape-case-prameela-naidu-visited-the-spot
ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು
author img

By

Published : Aug 26, 2021, 2:08 PM IST

ಮೈಸೂರು: ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಇಂದು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತೆಯನ್ನು ಮಾತನಾಡಿಸುವ ಪ್ರಯತ್ನ ಮಾಡಿದೆ. ಆದ್ರೆ ವೈದ್ಯರ ಸಲಹೆ ಮೇರೆಗೆ ಅವರನ್ನು ಮಾತನಾಡಿಸಲಿಲ್ಲ. ವೈದ್ಯರು ಅವರ ಆರೋಗ್ಯದ ಬಗ್ಗೆ ಮಾಹಿತಿ‌ ನೀಡಿದ್ದಾರೆ ಎಂದರು.

ಘಟನಾ ಸ್ಥಳಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಭೇಟಿ

ಯುವಕ ಮತ್ತು ಸಂತ್ರಸ್ತೆ ಇಬ್ಬರು ಶಾಕ್​​ನಲ್ಲಿದ್ದಾರೆ, ಒಂದೆರಡು ದಿನದ ನಂತರ ಸಹಜ ಸ್ಥಿತಿಗೆ ಬರುತ್ತಾರೆ. ಯುವಕನ ಹಣೆಗೆ ಗಾಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಸದ್ಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಅವರಿಗೆ ಸಿಕ್ಕಿರುವ 34 ಸಾಕ್ಷ್ಯಗಳ ಬಗ್ಗೆ ಮಾಹಿತಿ‌ ನೀಡಿದ್ದಾರೆ ಎಂದು ತಿಳಿಸಿದರು.

ಮಹಿಳಾ ಆಯೋಗದಲ್ಲಿ ಸುಮೋಟೊ ಕೇಸ್ ದಾಖಲಾಗಿದೆ. ಇದು ಹೇಯ ಕೃತ್ಯ, ಇಂತಹ ಕೃತ್ಯಗಳು‌ ನಡೆಯಬಾರದು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ ಎಂದು ಮಹಿಳಾ ಆಯೋಗದ ಅಧ್ಯಕ್ಷರು ಹೇಳಿದ್ರು.

ಓದಿ: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.