ETV Bharat / state

ಮೈಸೂರು ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಸರುವಾಸಿ: ಸಿಎಂ ಸಿದ್ದರಾಮಯ್ಯ

Mysuru Dussehra: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅರಮನೆ ವೇದಿಕೆಯಲ್ಲಿ ಆಯೋಜಿಸಿದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ನಡೆಯಿತು.

Mysuru Dussehra
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Oct 16, 2023, 7:32 AM IST

Updated : Oct 16, 2023, 9:56 AM IST

ಮೈಸೂರು: ''ಮೈಸೂರು ಮಹಾರಾಜರ ಕಾಲದಿಂದಲೂ ಕೂಡ ಕನ್ನಡ ನಾಡಿನಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಚ್ಚಿನ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಸಾಹಿತ್ಯ, ಸಂಸ್ಕೃತಿಗೆ ಹೆಸರಾದ ಜಿಲ್ಲೆ ಮೈಸೂರು. ಮೈಸೂರು ಸಾಹಿತ್ಯ ನೆಲೆಯ ತವರೂರು ಎಂದರೆ ತಪ್ಪಾಗಲಾರದು'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅರಮನೆ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ''ಕರ್ನಾಟಕ ಸರ್ಕಾರವು ಈವರೆಗೆ 30 ಪ್ರಶಸ್ತಿಗಳನ್ನು ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಪ್ರಮುಖರಿಗೆ ನೀಡುತ್ತಾ ಬಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಂಗೀತ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ನೀಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಮೈಸೂರಿನವರೇ ಆದ ಡಾ. ಪದ್ಮ ಮೂರ್ತಿ ಅವರಿಗೆ ನೀಡುತ್ತಿರುವುದು ನಮಗೆ ಹೆಮ್ಮೆಯ ವಿಷಯ'' ಎಂದರು.

''ಈ ಪ್ರಶಸ್ತಿಯನ್ನು ಮೊದಲ ಬಾರಿಗೆ ಗಾನ ಗಂಧರ್ವ ಪುಟ್ಟರಾಜು ಗವಾಯಿ ಅವರಿಗೆ ನೀಡಿತ್ತು. ಮೈಸೂರಿನ ಮಹಾರಾಜರ ಕಾಲದಲ್ಲಿ ಕಲೆ, ಸಾಹಿತ್ಯ, ಸಂಗೀತ ಕ್ಷೇತ್ರಗಳಿಗೆ ಪ್ರೋತ್ಸಾಹವನ್ನು ನೀಡುತ್ತಿರುವಂತೆಯೇ ಅದೇ ರೀತಿ ನಮ್ಮ ಸರ್ಕಾರ ಕೂಡ ವಿವಿಧ ಕ್ಷೇತ್ರಗಳಿಗೆ ಪ್ರೋತ್ಸಾಹ ಕೊಡುತ್ತಿದೆ'' ಎಂದ ಅವರು, ಸಾಧಕರಾದ ಪದ್ಮಾ ಮೂರ್ತಿಯವರ ತಂದೆ ಹಿರಿಯ ವಕೀಲರಾಗಿದ್ದರು. ಪದ್ಮಾ ಮೂರ್ತಿಯವರ ದೀರ್ಘಕಾಲ ಸಂಗೀತ ಸೇವೆಯನ್ನು ಗುರುತಿಸಿ ಸರ್ಕಾರವು ಅವರಿಗೆ ಪ್ರಶಸ್ತಿಯನ್ನು ನೀಡುವುದು ಶ್ಲಾಘನೀಯ ವಿಷಯವಾಗಿದೆ ಎಂದು ಹೇಳಿದರು.

''ನಮ್ಮ ನಾಡ ಹಬ್ಬ ಮೈಸೂರು ದಸರಾಕ್ಕೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ, ಜಿಲ್ಲೆಯ ಸಚಿವರು ಶ್ರಮಿಸಿ ಸಾಂಸ್ಕೃತಿಕ ಮೆರುಗು ನೀಡುವ ಕಾರ್ಯಕ್ರಮಗಳನ್ನು ರಚಿಸಿದ್ದಾರೆ. ನಾಡಹಬ್ಬ ಮೈಸೂರು ದಸರಾ 9 ದಿನಗಳ ಕಾಲ ನಡೆಯಲಿದ್ದು, ಪ್ರತಿಯೊಬ್ಬರು ಕೂಡ ಈ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕು'' ಎಂದು ಕರೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ''ದಸರಾ ಎಂದರೆ, ತಾಯಿ ಚಾಮುಂಡೇಶ್ವರಿ ದೇವಿ ದುಷ್ಟ ಶಕ್ತಿಯನ್ನು ಸಂಹರಿಸಿದ ಇತಿಹಾಸವನ್ನು ಸಾರುವ ಐತಿಹಾಸಿಕ ಇತಿಹಾಸ ಹಿನ್ನೆಲೆಯನ್ನು ಹೊಂದಿದೆ. ಈವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ನಡೆಯುತ್ತಿರುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಕೂಡ ನಮ್ಮ ಸಿಎಂ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ'' ಎಂದರು.

''ಹಿಂದೆ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದವರು ಮೈಸೂರಿನ ದೇವರಾಜ ಅರಸು. ಕರ್ನಾಟಕ ರಾಜ್ಯವೆಂದು ನಾಮಕರಣವಾಗಿ 50 ವರ್ಷ ಪೊರೈಸಿದೆ. ಸಿಎಂ ಸಿದ್ದರಾಮಯ್ಯನವರು ಕರ್ನಾಟಕಕ್ಕೆ 50 ವರ್ಷ ಸಂಭ್ರಮವನ್ನು ಒಂದು ವರ್ಷ ಕಾಲ ಆಚರಿಸಬೇಕೆಂದು ಸಲಹೆ ನೀಡಿದ್ದಾರೆ. ಕನ್ನಡ ನೆಲ, ಜಲ, ಭಾಷೆಯ ಕುರಿತು ವರ್ಷಪೂರ್ತಿ ತಿಳಿಸುವ ಕಾರ್ಯಕ್ರಮಗಳನ್ನು ಇಲಾಖೆಯಿಂದ ಹಮ್ಮಿಕೊಳ್ಳಲಾಗುವುದು. ನಮ್ಮ ಸರ್ಕಾರದಿಂದ ಈ ಬಾರಿ ನವೆಂಬರ್ 1ರಿಂದ ಪ್ರಾರಂಭವಾಗುವ ಈ ಹಬ್ಬವನ್ನು ವರ್ಷವಿಡೀ ಆಚರಿಸಲಾಗುವುದು'' ಎಂದು ಸಚಿವರು ತಿಳಿಸಿದರು.

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ: ಸಂಗೀತದಲ್ಲಿ ಸಾಧನೆಗೈದ ಡಾ. ಪದ್ಮಾ ಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಡಾ. ಪದ್ಮಾ ಮೂರ್ತಿ ಮಾತನಾಡಿ, ''ನಾನು ಜನಿಸಿದ ಮೈಸೂರಿನಲ್ಲೇ ಪ್ರಶಸ್ತಿಯನ್ನು ಪಡೆದಿರುವುದು ನಮ್ಮ ಸೌಭಾಗ್ಯ. ಕರ್ನಾಟಕ ಸಂಗೀತಕ್ಕೆ ನಾನು ಸಲ್ಲಿಸಿರುವ ಅಳಿಲು ಸೇವೆಯನ್ನು ಗುರುತಿಸಿ ಅಪಾರ ಗೌರವ ನೀಡಿದ್ದಾರೆ. ನನ್ನ ತಂದೆ, ತಾಯಿ ಹಾಗೂ ಗುರುಗಳು ಈ ವೇದಿಕೆ ಮೇಲೆ ನಿಲ್ಲುವಂತೆ ಮಾಡಿದ್ದಾರೆ. ಸಂಗೀತಕ್ಕೆ ಪ್ರೋತ್ಸಾಹ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು'' ಎಂದು ತಿಳಿಸಿದರು. ಸಂಗೀತದಲ್ಲಿ ಸಾಧನೆ ಗೈದ ಡಾ.ಪದ್ಮ ಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಲಾಯಿತು. ದಸರಾ ಸಂಬಂಧಿತ ಎಲ್ಲಾ ಕಾರ್ಯಕ್ರಮಗಳ ಆರಂಭದಲ್ಲಿ ಸಂವಿಧಾನ ಗೀತೆಯನ್ನು ಹಾಡಲಾಯಿತು.

ಸಚಿವರಾದ ಕೆ. ವೆಂಕಟೇಶ್, ಕೆ. ಜೆ. ಜಾರ್ಜ್, ಮೈಸೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಶಿವಕುಮಾರ್, ಉಪ ಮೇಯರ್​ ಡಾ. ರೂಪ, ಶಾಸಕರಾದ ತನ್ವೀರ್ ಸೇಠ್, ಶ್ರೀವತ್ಸ, ಡಿ. ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಡಿ. ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ದಸರಾ ಸಮಿತಿಯ ವಿಶೇಷ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ವಿವಿಧ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿ ಸಂಭ್ರಮ: ರತ್ನಖಚಿತ ಸಿಂಹಾಸನದಲ್ಲಿ ಯದುವೀರ್ ಖಾಸಗಿ ದರ್ಬಾರ್

Last Updated : Oct 16, 2023, 9:56 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.