ಮೈಸೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮೈಸೂರಿನ ಕಾಂಗ್ರೆಸ್ ಶಾಸಕರು ಸಭೆ ನಡೆಸಿದರು. ಜಲದರ್ಶಿನಿ ಸರ್ಕಾರಿ ಅತಿಥಿ ಗೃಹದಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ, ಶಾಸಕರಾದ ಎಚ್.ಪಿ.ಮಂಜುನಾಥ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಮಾಜಿ ಶಾಸಕ ಕಳಲೆ ಎನ್.ಕೇಶವಮೂರ್ತಿ ಹಾಗೂ ಪಕ್ಷದ ಮುಖಂಡರು ಸಭೆ ನಡೆಸಿದರು.
ಈಗಾಗಲೇ ಬಿಜೆಪಿ ಗ್ರಾಮ ಪಂಚಾಯಿತಿ ಚುನಾವಣೆಗಾಗಿ ಬಿರುಸಿನ ಪ್ರಚಾರ ಆರಂಭಿಸಿದೆ. ಜೆಡಿಎಸ್ ಕೂಡ ಪ್ರಚಾರ ತಂತ್ರದಲ್ಲಿ ಮುನ್ನೆಲೆಗೆ ಬಂದಿದೆ. ಈ ನಡುವೆ ಜೆಡಿಎಸ್ ಹಾಗೂ ಬಿಜೆಪಿ ತಂತ್ರದ ವಿರುದ್ಧ ಪಕ್ಷವನ್ನು ಸಂಘಟಿಸಲು ಈ ಚುನಾವಣೆ ಪ್ರಮುಖವಾಗಿರುವುದರಿಂದ ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.