ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಸಂದೇಶ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ನೀಡಿದ ದೂರಿನ ಅನ್ವಯ, ಸೈಬರ್ ಪೊಲೀಸರು ನಕಲಿ ಫೇಸ್ಬುಕ್ ಖಾತೆ ತೆರೆದ ವ್ಯಕ್ತಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
ನನ್ನ ಹೆಸರಿನಲ್ಲಿ ನಕಲಿ ಎಫ್ಬಿ ಖಾತೆ ತೆರೆದು ಅಶ್ಲೀಲ ಮಾಹಿತಿ ಹಾಕಿ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ, ಇದರಿಂದ ನನಗೆ ಮಾನಹಾನಿ ಆಗುತ್ತಿದೆ. ಸುಳ್ಳು ಸುದ್ದಿ ಹಾಗೂ ಇತರ ಸಂದೇಶಗಳನ್ನು ಹಾಕುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಳೆದ ಎರಡು ದಿನಗಳ ಹಿಂದೆ ನಟಿ ಮೈಸೂರಿನ ಸೈಬರ್ ಠಾಣೆಗೆ ಬಂದು ಲಿಖಿತ ದೂರು ಸಲ್ಲಿಸಿದ್ದರು.
ಇದನ್ನೂ ಓದಿ: 'ಮ್ಯಾನೇಜ್‍ಮೆಂಟ್ ಕೋಟಾದ ಎಂಜಿನಿಯರಿಂಗ್ ಪ್ರವೇಶಕ್ಕೆ ರಾಷ್ಟ್ರಮಟ್ಟದ ಸಿಇಟಿ ನಡೆಸಲು ಸಿದ್ಧ'