ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎನ್.ಆರ್.ಕ್ಷೇತ್ರ ಹಾಗೂ ಅದಕ್ಕೆ ಹೊಂದಿಕೊಂಡಿರುವ ಚಾಮರಾಜ ಕ್ಷೇತ್ರದ ಕೆಲವು ಭಾಗಗಳನ್ನು ಇಂದಿನಿಂದ ಲಾಕ್ಡೌನ್ ಮಾಡಲಾಗಿದೆ.
ಉದಯಗಿರಿ ಸಂಪರ್ಕಿಸುವ ಪ್ರಮುಖ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ನೀಡಿದ್ದು, ಅಗತ್ಯೇತರ ವಸ್ತುಗಳ ಅಂಗಡಿಗಳಿಗೆ ಅವಕಾಶ ನೀಡಲಾಗಿಲ್ಲ.
ಇಂದಿನಿಂದ ಜು.24ರವರಗೆ ನಿರ್ಬಂಧಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಪರಿಶೀಲಿಸಿದ ಡಿಸಿಪಿ ಡಾ.ಪ್ರಕಾಶಗೌಡ ಅವರು 'ಈಟಿವಿ ಭಾರತ'ಕ್ಕೆ ಲಾಕ್ಡೌನ್ ಬಗ್ಗೆ ವಿವರಣೆ ನೀಡಿದರು.