ETV Bharat / state

ಮೈಸೂರು : ಅನ್ನ ತಿಂದ ಮನೆಗೆ ಕನ್ನ ಹಾಕಿದ ಮನೆಗಳ್ಳನ ಬಂಧನ - Nanjanagudu crime latest news

ಮನೆಗೆಸಲ ಮಾಡುತ್ತಾ ಆ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಖದೀಮನನ್ನು ನಂಜನಗೂಡು ಪೊಲೀಸರು ಬಂಧಿಸಿದ್ದಾರೆ.

Theft
Theft
author img

By

Published : Oct 19, 2020, 5:00 PM IST

ಮೈಸೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಹತ್ತು ತಿಂಗಳಿನಿಂದ ಗೌಪ್ಯವಾಗಿ ಚಿನ್ನಾಭರಣ ಕದಿಯುತ್ತಿದ್ದ ಖದೀಮನನ್ನು ನಂಜನಗೂಡು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಹೇಮಂತ್ ಕುಮಾರ್ ಬಂಧಿತ ಆರೋಪಿ. ಈತ ತಾಲೂಕಿನ ಯರಗನಹಳ್ಳಿ ಗ್ರಾಮದವನ್ನಾಗಿದ್ದು, ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಶಿವನಾಗು ಎಂಬುವವರ ಮನೆಯಲ್ಲಿ ಮನೆಗೆಲಸ ಮಾಡುತ್ತಲೇ ಕಳೆದ 10 ತಿಂಗಳಿಂದ ಮನೆಯವರಿಗೆ ಗೊತ್ತಾಗದಂತೆ ಚಿನ್ನಾಭರಣಗಳನ್ನು ಕಳ್ಳತನ ಮಾಡುತ್ತಿದ್ದನು.

ಈ ಕುರಿತಂತೆ ಮನೆ ಮಾಲೀಕ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರು, ಮನೆಗೆಲಸ ಮಾಡುತ್ತಿದ್ದ ಹೇಮಂತ್ ನನ್ನು ವಿಚಾರಣೆಗೊಳಪಡಿಸಿದಾಗ ಕಳ್ಳತನ ಮಾಡಿರುವುದಾಗಿ ತಪ್ಪೋಪ್ಪಿಕೊಂಡಿದ್ದಾನೆ.

ಬಂಧಿತನಿಂದ 5 ಲಕ್ಷ ಮೌಲ್ಯದ 95 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.