ETV Bharat / state

ನೂತನ ಶಿಕ್ಷಣ ನೀತಿ ಈ ವರ್ಷದಿಂದಲೇ ಜಾರಿ : ಡಿಸಿಎಂ ಅಶ್ವತ್ಥ್ ನಾರಾಯಣ - ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿಕೆ

ಮನಸ್ಸನ್ನು ನಿರ್ಮಲಗೊಳಿಸುವ, ಆ ಮನಸ್ಸಿಗೊಂದು ದಿವ್ಯತೆ ತಂದು ಕೊಡುವ ಆ ಪಾರಾಯಣವು ಪ್ರತಿಯೊಬ್ಬರ ಮನಸ್ಸನ್ನು ಸ್ವಚ್ಛಗೊಳಿಸುವ ಚಿಕಿತ್ಸಕ ಶಕ್ತಿ ಹೊಂದಿದೆ. ಇಂಥ ಕಾರ್ಯಕ್ರಮಗಳು ಶ್ರೀ ಮಠದ ಕಡೆಯಿಂದ ಇನ್ನೂ ಹೆಚ್ಚಾಗಿ ನಡೆಯಲಿ..

dcm-ashwatth-narayan
dcm-ashwatth-narayan
author img

By

Published : Feb 17, 2021, 9:34 PM IST

ಮೈಸೂರು : ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಾಂಸ್ಕೃತಿಕ, ಧಾರ್ಮಿಕ ಮೌಲ್ಯಗಳ ಜತೆ ಕಲಿಯುವ ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆಯನ್ನು ಅಡಕಗೊಳಿಸಲಾಗಿದೆ.

ನೂತನ ಶಿಕ್ಷಣ ನೀತಿಯೂ ಈ ವರ್ಷದಿಂದಲೇ ಜಾರಿಯಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಹೇಳಿದರು.

ಮೈಸೂರಿನ ಕೆ.ಆರ್.ನಗರ ತಾಲೂಕಿನ ಶ್ರೀ ಯಡತೊರೆ ಯೋಗಾನಂದೇಶ್ವರ ಸರಸ್ವತಿ ಮಠದ ಉತ್ತರಾಧಿಕಾರಿ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಣವನ್ನು ಉನ್ನತ ಉದ್ದೇಶಗಳನ್ನಿಟ್ಟುಕೊಂಡು ಕಲಿಯಬೇಕು ಎಂಬುದು ನಮ್ಮ ಹಿರಿಯರ ಅಪೇಕ್ಷೆ. ಅವರ ಆಶಯಕ್ಕೆ ತಕ್ಕಂತೆಯೇ ಶಿಕ್ಷಣ ನೀತಿ ರೂಪುಗೊಂಡಿದೆ.

ಕಿರಿಯ ಹಂತದಿಂದಲೇ ಸಾಮಾಜಿಕ ಹೊಣೆಗಾರಿಕೆ ಕಲಿಸುವಂಥ ಉತ್ತಮ ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ಸಿಗಲಿದೆ. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದರು.

ಶ್ರೀ ಯಡತೊರೆ ಯೋಗಾನಂದೇಶ್ವರ ಸರಸ್ವತಿ ಮಠದ ಉತ್ತರಾಧಿಕಾರಿ ಸ್ವೀಕಾರ ಕಾರ್ಯಕ್ರಮ

ಸಮಾಜಕ್ಕೆ ಸರಿಯಾದ ಚಿಕಿತ್ಸೆ ಶಿಕ್ಷಣದಿಂದ ಮಾತ್ರ ಸಿಗುತ್ತದೆ. ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಗುಣಮಟ್ಟದ ಜೀವನ ಕಟ್ಟಿಕೊಳ್ಳಬಹುದು. ಇದರಲ್ಲಿ ನಮ್ಮ ಸಂಸ್ಕೃತಿ, ನಮ್ಮ ಆಚಾರ-ವಿಚಾರ ಇತ್ಯಾದಿ ಅಂಶಗಳೂ ಇರುತ್ತವೆ. ಹೀಗಾಗಿ, ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ನಾಡಿನ ಎಲ್ಲ ಸ್ವಾಮೀಜಿಗಳ ಮಾರ್ಗದರ್ಶನ ಅಗತ್ಯ ಎಂದರು.

ಸೌಂದರ್ಯ ಲಹರಿ ಪ್ರಭಾವ : ಶ್ರೀ ಶಂಕರಭಾರತಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಾ ಬಂದಿರುವ ಶ್ರೀ ಆದಿ ಶಂಕರರ 'ಸೌಂದರ್ಯ ಲಹರಿ' ಪಾರಾಯಣ ನನ್ನ ಮೇಲೆ ಸಾಕಷ್ಟು ಪ್ರಭಾವ ಬೀರಿದೆ ಎಂದ ಉಪ ಮುಖ್ಯಮಂತ್ರಿಗಳು, ನಾನು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ಕ್ಷೇತ್ರವು ಸಾಂಸ್ಕೃತಿಕ, ಧಾರ್ಮಿಕ ಹಾಗೂ ಶೈಕ್ಷಣಿಕವಾಗಿ ಬಹಳ ಸಮೃದ್ಧವಾಗಿದೆ.

ಪ್ರತಿ ಮನೆಯೂ ಒಂದೊಂದು ಸರಸ್ವತಿ ಮಂದಿರ. ಅಂಥ ಕ್ಷೇತ್ರದ ವ್ಯಾಪ್ತಿಯಲ್ಲಿ ಜಗತ್ತಿನ ಅತಿದೊಡ್ಡ ಹಾಗೂ ದಶಕದ ʼಸೌಂದರ್ಯ ಲಹರಿʼ ಪಾರಾಯಣ ಕಾರ್ಯಕ್ರಮವು ನಡೆದಿತ್ತು ಎಂದು ನುಡಿದರು.

ಮನಸ್ಸನ್ನು ನಿರ್ಮಲಗೊಳಿಸುವ, ಆ ಮನಸ್ಸಿಗೊಂದು ದಿವ್ಯತೆ ತಂದು ಕೊಡುವ ಆ ಪಾರಾಯಣವು ಪ್ರತಿಯೊಬ್ಬರ ಮನಸ್ಸನ್ನು ಸ್ವಚ್ಛಗೊಳಿಸುವ ಚಿಕಿತ್ಸಕ ಶಕ್ತಿ ಹೊಂದಿದೆ. ಇಂಥ ಕಾರ್ಯಕ್ರಮಗಳು ಶ್ರೀ ಮಠದ ಕಡೆಯಿಂದ ಇನ್ನೂ ಹೆಚ್ಚಾಗಿ ನಡೆಯಲಿ ಎಂದು ಆಶಿಸಿದರು.

ಶಿಷ್ಯ ಸ್ವೀಕಾರ ಸಮಾರಂಭದಲ್ಲಿ ಶ್ರೀ ಮಠದ ಶ್ರೀ ಶಂಕರ ಭಾರತೀ ಮಹಾಸ್ವಾಮೀಜಿಗಳು ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಿರಿಯ ಶ್ರೀಗಳು ಹಾಗೂ ಮಾಜಿ ಸಚಿವ ಹೆಚ್.ವಿಶ್ವನಾಥ್‌, ಶಾಸಕ ಸಾ ರಾ ಮಹೇಶ್‌ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.