ETV Bharat / state

ಮುಂಬೈನಿಂದ ಮೈಸೂರಿಗೆ ಬೈಕ್​​ನಲ್ಲಿ ನುಸುಳಿದ್ದನಂತೆ ಕೊರೊನಾ ಸೋಂಕಿತ: ಡಿಸಿ ಸ್ಪಷ್ಟನೆ - ಮೈಸೂರು ಕೊರೊನಾ ಲೇಟೆಸ್ಟ್​​ ನ್ಯೂಸ್

ಮುಂಬೈನಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಗ್ರಾಮಯೊಂದರ ಮೂವರು ಯುವಕರು ಬೈಕ್​​ನಲ್ಲಿ ಬರುವಾಗ ಗಡಿ ಚೆಕ್ ಪೋಸ್ಟ್​ನಲ್ಲಿ ಸಿಕ್ಕಿ ಬಿದ್ದಿದ್ದು, ಅವರನ್ನು ಕ್ವಾರಂಟೈನ್​ ಮಾಡಲಾಗಿದೆ. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ 18 ದಿನಗಳ ಬಳಿಕ ಜಿಲ್ಲೆಯಲ್ಲಿ ಮೊದಲ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್. ಜಿ .ಶಂಕರ್ ತಿಳಿಸಿದರು.

Abhiram. G .Shankar
ಅಭಿರಾಮ್. ಜಿ .ಶಂಕರ್
author img

By

Published : May 19, 2020, 9:57 AM IST

ಮೈಸೂರು: ಮುಂಬೈನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಹೆದರಿ ಜಿಲ್ಲೆಗೆ ಬೈಕ್​​ನಲ್ಲಿ ಬಂದಿದ್ದ ಮೂವರಲ್ಲಿ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, 18 ದಿನಗಳ ಬಳಿಕ ಹೊಸದಾಗಿ ಹೊಸ ಪ್ರಕರಣ ಪತ್ತೆಯಾದಂತಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

Information on the case
ಪ್ರಕರಣದ ಕುರಿತ ಮಾಹಿತಿ

ನಿನ್ನೆ ಮುಂಬೈನಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಗ್ರಾಮಯೊಂದರ ಮೂವರು ಯುವಕರು ಬೈಕ್​​ನಲ್ಲಿ ಬರುವಾಗ ಗಡಿ ಚೆಕ್ ಪೋಸ್ಟ್​ನಲ್ಲಿ ಸಿಕ್ಕಿ ಬಿದ್ದಿದ್ದು, ಅವರನ್ನು ಕ್ವಾರಂಟೈನ್​ ಮಾಡಲಾಗಿದೆ. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ಇರುವುದು ಪತ್ತೆಯಾಗಿದ್ದು, ಈ ಮೂಲಕ 18 ದಿನಗಳ ಬಳಿಕ ಜಿಲ್ಲೆಯಲ್ಲಿ ಮೊದಲ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್. ಜಿ .ಶಂಕರ್ ತಿಳಿಸಿದರು.

ಜಿಲ್ಲೆಯಲ್ಲಿ 701 ಜನರನ್ನು ಕ್ವಾರಂಟೈನ್​​ನಲ್ಲಿದ್ದು, ನಿನ್ನೆಯ ಪ್ರಕರಣ ಸೇರಿದಂತೆ 91ಸೋಂಕಿತ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 90 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು , ಒಬ್ಬ ವ್ಯಕ್ತಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮುಂಬೈ ಭಯ :

ಇಲ್ಲಿಯವರೆಗೆ ಜುಬಿಲಂಟ್​​ ಹಾಗೂ ತಬ್ಲಿಘಿ ಜಮಾತ್ ಸೋಂಕಿತರ ಭಯವಿತ್ತು. ಆದರೀಗ ಮುಂಬೈನಿಂದ ಜಿಲ್ಲೆಗೆ ಆಗಮಿಸುತ್ತಿರುವ ಜನರಿಂದ ಎಲ್ಲಿ ಮತ್ತೆ ಪ್ರಕರಣಗಳು ಹೆಚ್ಚಾಗುತ್ತವೆಯೋ ಎಂಬ ಆತಂಕ ಮೂಡಿದೆ. ಮುಂಬೈನಲ್ಲಿ ಮೈಸೂರು ಸೇರಿದಂತೆ ಕೆ.ಆರ್.ನಗರ ತಾಲೂಕು, ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್.ಡಿ ಕೋಟೆ ಭಾಗದ ಜನರು ನೆಲಸಿದ್ದು, ಅಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬಂದವರನ್ನು ಸೂಕ್ತ ತಪಾಸಣೆಗೆ ಒಳಪಡಿಸಲು ಹೆದ್ದಾರಿಯ ಚೆಕ್ ಪೋಸ್ಟ್​ಗಳಲ್ಲಿ ತಪಾಸಣೆ ಮಾಡಿ ಕಡ್ಡಾಯವಾಗಿ ಕ್ಯಾರಂಟೈನ್​​ಗೆ ಒಳಪಡಿಸಲಾಗುತ್ತಿದೆ. ಕೊರೊನಾ ಮುಕ್ತ ಜಿಲ್ಲೆಯಾಗಿ ಬಂದ ನಂತರ ಮತ್ತೆ ಸೋಂಕು ಪ್ರಕರಣ ಪತ್ತೆಯಾಗಿರುವುದರ ಬಗ್ಗೆ ಭಯ ಪಡುವ ಅಗತ್ಯ ಇಲ್ಲ. ಈ ಸಮಯದಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಅಭಿರಾಮ್ .ಜಿ .ಶಂಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.