ETV Bharat / state

Mysore ಜಿಲ್ಲೆಯಲ್ಲಿ 3 ದಿನಗಳ ಕಾಲ ಕೋವಿಡ್ ಲಸಿಕೆ ಲಭ್ಯ ಇಲ್ಲ: DHO - ಮೈಸೂರಿನಲ್ಲಿ ಮುಂದಿನ 3 ದಿನಗಳ ಕಾಲ ಕೋವಿಡ್ ಲಸಿಕೆ ಲಭ್ಯವಿಲ್ಲ

ಇಂದಿನಿಂದ ಕೋವಿಡ್ ಲಸಿಕೆ ಲಭ್ಯವಿಲ್ಲ ಎಂದು ಸರ್ಕಾರಿ ಆಸ್ಪತ್ರೆಗಳ ಮುಂದೆ ಬೋರ್ಡ್ ಹಾಕಲಾಗಿದ್ದು, ಲಸಿಕೆ ಹಾಕಿಸಿಕೊಳ್ಳಲು ಬಂದ ಜನರು ಸಿಬ್ಬಂದಿ ಅವರಿಂದ ಮಾಹಿತಿ ಪಡೆದು ವಾಪಸ್ ಹೋಗುತ್ತಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ 3 ದಿನಗಳ ಕಾಲ ಕೋವಿಡ್ ಲಸಿಕೆ ಲಭ್ಯವಿರುವುದಿಲ್ಲ

author img

By

Published : Jun 28, 2021, 5:38 PM IST

ಮೈಸೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಲಭ್ಯವಿಲ್ಲ ಎಂಬ ನಾಮ ಫಲಕವನ್ನು ಹಾಕಲಾಗಿದ್ದು, ಈ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿ ಸ್ಪಷ್ಟೀಕರಣ ನೀಡಿದ್ದಾರೆ.

18 ವರ್ಷ ತುಂಬಿದ ದೇಶದ ಪ್ರತಿಯೊಬ್ಬರಿಗೂ ಉಚಿತ ಕೋವಿಡ್ ಲಸಿಕೆ ಹಾಕಲಾಗುವುದು ಎಂಬ ಕಾರ್ಯಕ್ರಮವನ್ನು ಜೂನ್-21 ರಂದು ಆರಂಭಿಸಲಾಗಿತ್ತು. ಅದರಂತೆ ಮೈಸೂರು ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಸಿಕೆ ಹಾಕಲಾಗಿತ್ತು. ಆದರೆ, ಇಂದಿನಿಂದ ಕೋವಿಡ್ ಲಸಿಕೆ ಲಭ್ಯವಿಲ್ಲ ಎಂದು ಸರ್ಕಾರಿ ಆಸ್ಪತ್ರೆಗಳ ಮುಂದೆ ಬೋರ್ಡ್ ಹಾಕಲಾಗಿದ್ದು, ಲಸಿಕೆ ಹಾಕಿಸಿಕೊಳ್ಳಲು ಬಂದ ಜನರು ಸಿಬ್ಬಂದಿಯವರಿಂದ ಮಾಹಿತಿ ಪಡೆದು ವಾಪಸ್ ಹೋಗುತ್ತಿದ್ದಾರೆ.

ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪ್ರಸಾದ್ ಅವರನ್ನು ಸಂಪರ್ಕಿಸಿದಾಗ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆಯಿಂದ 3 ದಿನಗಳ ಕಾಲ ಲಸಿಕೆ ಹಾಕುವುದನ್ನು ಸ್ಥಗಿತಗೊಳಿಸಲಾಗಿದ್ದು , ಜುಲೈ 01 ರಿಂದ ಮತ್ತೆ ಲಸಿಕೆ ಅಭಿಯಾನ ಆರಂಭಿಸಲಾಗುವುದು. ಸಾರ್ವಜನಿಕರು 3 ದಿನಗಳ ಕಾಲ ಸರ್ಕಾರಿ ಆಸ್ಪತ್ರೆಗೆ ಲಸಿಕೆ ಹಾಕಿಸಿಕೊಳ್ಳಲು ಬರಬೇಡಿ. 3 ದಿನದ ನಂತರ, ಅಂದರೆ ಜುಲೈ-1 ರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.