ಮೈಸೂರು : ಚಕ್ರವರ್ತಿ ಸೂಲಿಬೆಲೆ ಅವರು ಕೋಮು ದ್ವೇಷ ಬಿತ್ತುವ ಕಾರ್ಯ ಮಾಡುತ್ತಿದ್ದಾರೆ. ನಮ್ಮ ಮಠದ ವಿರುದ್ಧ ಹೀಗೆ ಮಾಡಿದರೆ, ಮುಂದಿನ ಪರಿಣಾಮ ನೆಟ್ಟಗಿರಲ್ಲ ಎಂದು ನಿರಂಜನ ಮಠ ಉಳಿಸಿ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.
ಈ ಸಂಬಂಧ ನಿರಂಜನ ಮಠದ ಆವರಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ರಾಷ್ಟ್ರೀಯ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ರಾಮಕೃಷ್ಣ ಆಶ್ರಮ ಹಾಗೂ ಚಕ್ರವರ್ತಿ ಸೂಲಿಬೆಲೆ ಅವರಿಂದ ಕೋಮು ದ್ವೇಷ ಬಿತ್ತುವ ಕಾರ್ಯ ನಡೆಯುತ್ತಿದೆ. ಕಳೆದ 4 ದಿನಗಳಿಂದ ರಾಮಕೃಷ್ಣ ಆಶ್ರಮದಲ್ಲಿಯೇ ಉಳಿದಿರುವ ಚಕ್ರವರ್ತಿ ಸೂಲಿಬೆಲೆ, ಆಶ್ರಮದ ಏಜೆಂಟರಾಗಿ ವರ್ತಿಸುತ್ತಿದ್ದಾರೆ. ಜಾತಿ ಹೆಸರಿನಲ್ಲಿ ದ್ವೇಷ ಬಿತ್ತುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಮಕೃಷ್ಣ ಆಶ್ರಮದವರು ವಿವೇಕಾನಂದ ಸ್ಮಾರಕ ನಿರ್ಮಾಣಕ್ಕೆ ಸರ್ಕಾರಕ್ಕೆ ಜಾಗ ನೀಡುವಂತೆ ಕೇಳಿರಲಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಆಶ್ರಮದವರು ಜಾಗ ಕೇಳಿದ ಹಿನ್ನೆಲೆ ಕ್ಯಾಬಿನೆಟ್ನಲ್ಲಿ ಒಪ್ಪಿಗೆ ಸೂಚಿಸಲಾಯಿತು. ನಿರಂಜನ ಮಠದ ಜಾಗವನ್ನು ಕಬಳಿಸುವ ಹುನ್ನಾರದಿಂದ ಆಶ್ರಮದವರು ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಓದಿ: ವಿಪಕ್ಷ ಕುಮಾರವ್ಯಾಸ v/s ಆಡಳಿತ ಕುಮಾರವ್ಯಾಸ.. ಸಿದ್ದರಾಮಯ್ಯ ಹಳೆಗನ್ನಡ ಮೇಷ್ಟ್ರು, ಸಿಎಂ ಬೊಮ್ಮಾಯಿನೂ ಸೂಪರು..