ಮೈಸೂರು: ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ. ಇನ್ನು ಮುಂದೆ ಜೆಡಿಎಸ್ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ. ಸ್ಥಳಿಯವಾಗಿ ಅವರುಗಳು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆಡಿಎಸ್ಗೆ ಯಾವುದೇ ಬೆಂಬಲ ಇಲ್ಲ ಎಂದರು.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರವಾಗಿ ಮಾತನಾಡಿ, ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿ. ಡಿಕೆಶಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರನ್ನು ಸಿಕ್ಕಿಸುತ್ತಿದ್ದಾರೆ ಎಂದು ಡಿಕೆಶಿಯೇ ಹೇಳಿದ್ದಾರೆ. ಅದರ ಬಗ್ಗೆ ನಾನೇನು ಹೇಳಲಿ ಎಂದರು.